ಬಿಜೆಪಿ ಟ್ವೀಟ್ 
ರಾಜಕೀಯ

ನಮ್ಮ ಕರ್ಮಕಾಂಡಗಳನ್ನು ಯಾರು ಕೇಳಂಗಿಲ್ಲ; ಪ್ರಶ್ನೆ ಮಾಡಿದವರಿಗೆ ಇದೇ ಸ್ಥಿತಿ: ಬಿಜೆಪಿ ಆಕ್ರೋಶ

ಸಭಾಧ್ಯಕ್ಷರ ಪೀಠದ ಮೇಲೆ ಪೇಪರ್ ತೂರಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು: ಸಭಾಧ್ಯಕ್ಷರ ಪೀಠದ ಮೇಲೆ ಪೇಪರ್ ತೂರಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಪ್ರಜಾಪ್ರಭುತ್ವದ ಬಗ್ಗೆ ವಿದೇಶಗಳಲ್ಲಿ ಸುಳ್ಳು ಮಾತನಾಡುವ ಕಾಂಗ್ರೆಸ್ ಪಕ್ಷದ ಆಡಳಿತವಿರುವ ಕರ್ನಾಟಕದಲ್ಲಿ ಪ್ರಜಾಪ್ರಭುತ್ವವನ್ನೇ ದಮನಿಸುವ ಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದೆ.

ಖಾಸಗಿ ರಾಜಕೀಯ ಕಾರ್ಯಕ್ರಮಕ್ಕೆ ಅನೈತಿಕವಾಗಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಹೇಗೆ..?  ಬಂಧಿತ ಐವರು ಉಗ್ರರ ವಿರುಧ್ಧ ಪ್ರೈಮಾಫೇಸಿ ಸಾಕ್ಷಿಗಳಿದ್ದರೂ ಗೃಹ ಸಚಿವರು ಕ್ಲೀನ್ ಚೀಟ್ ಕೊಟ್ಟಿದ್ದೇಕೆ..? ಮುಂಗಾರು ಕೈಕೊಟ್ಟು ಕಂಗಾಲಾದ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. 42 ರೈತರು ಸಾವಿಗೆ ಶರಣಾಗಿದ್ದಾರೆ. ಸರಕಾರದ ಕ್ರಮಗಳೇನು ಎಂದು ಪ್ರಶ್ನಿಸಿದೆ.

ಕಾನೂನು ಸುವ್ಯವಸ್ಥೆ ಹದಗೆಟ್ಟು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಶೇಕಡಾ 35 ರಷ್ಟು ಕ್ರೈಮ್ ರೇಟ್ ಹೆಚ್ಚಾಗಿದೆ. ಗೃಹ ಸಚಿವರು ಮಾಡುತ್ತಿರುವುದಾದರೂ ಏನು..? ಅಧಿಕಾರಕ್ಕೆ ಬರಲು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಗದ್ದುಗೆ ಹಿಡಿದು ಇದೀಗ ಕಂಡೀಷನ್ ಹಾಕಿದ್ದು ಅಲ್ಲದೆ, ಅದನ್ನು ಜಾರಿ ಮಾಡದೆ ಕಾಲ ಹರಣ ಮಾಡುತ್ತಿರುವುದು ಏಕೆ..? ತರಕಾರಿ, ಹಾಲು, ವಿದ್ಯುತ್, ನೀರು ಹೀಗೆ ಎಲ್ಲಾ ಬೆಲೆಗಳನ್ನು ಏರಿಸುತ್ತಾ ಜನರ ರಕ್ತವನ್ನು ಹೀರುತ್ತಿರುವುದು ಏಕೆ.. ?ನೂರಾರು ಕೋಟಿ ಕೈಬದಲಾಗಿರುವ #ShadowCM ನೇತೃತ್ವದ ವರ್ಗಾವಣೆ ದಂಧೆಗೆ ಕೊನೆ ಎಂದು ಎಂಬುದಾಗಿ ಪ್ರಶ್ನೆಗಳ ಸುರಿಮಳೆ ಸುರಿಸಿದೆ.

ಸರಕಾರಿ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ಮಾಡುವ, Target ನೀಡುವ ಅಧಿಕಾರ ಸುರ್ಜೇವಾಲಾರಿಗೆ ಕೊಟ್ಟಿದ್ದು ಯಾರು..?  ಕಲುಷಿತ ನೀರು ಪೂರೈಕೆ, ಬಿಸಿಯೂಟದಲ್ಲಿ ವಿಷಪ್ರಾಶನ, ಕೊಳೆತ ಮೊಟ್ಟೆಗಳನ್ನು ಕೊಟ್ಟು ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿರುವುದು ಏಕೆ..?  ರೈತ ವಿರೋಧಿ, ಜನ ವಿರೋಧಿ, ನಾಡ ವಿರೋಧಿ, ಧರ್ಮ ವಿರೋಧಿ ನಿಲುವುಗಳನ್ನು ಕೈಗೊಂಡು ಏನನ್ನು ಸಾಧಿಸಲು ಹೊರಟಿದ್ದೀರಿ..? ಸರಕಾರ ಬಂದು ಕೇವಲ 2 ತಿಂಗಳಲ್ಲಿ ನೂರೆಂಟು ಸಮಸ್ಯೆಗಳು, ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದೆ.

ಕಾಂಗ್ರೆಸ್ ಈ ಪ್ರಶ್ನೆಗಳಿಂದ ದೂರ ಓಡುತ್ತಿದೆ, ಪ್ರಶ್ನಿಸುವ ನಮ್ಮ ಶಾಸಕರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವವನ್ನು ದಮನಿಸುತ್ತಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಮೇಲಾಗುತ್ತಿದೆ ದಾಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT