ಶೋಭಾ ಕರಂದ್ಲಾಜೆ 
ರಾಜಕೀಯ

ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯೇ ವಿಪಕ್ಷಗಳ 'INDIA': ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಷ್ಟ್ರಮಟ್ಟದಲ್ಲಿ 'INDIA' ಎಂಬ ವಿರೋಧ ಪಕ್ಷಗಳ ಹೊಸ ಒಕ್ಕೂಟ ರಚನೆಯು ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯಾಗಿದೆ ಎಂದು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಂಗಳೂರು: ರಾಷ್ಟ್ರಮಟ್ಟದಲ್ಲಿ 'INDIA' ಎಂಬ ವಿರೋಧ ಪಕ್ಷಗಳ ಹೊಸ ಒಕ್ಕೂಟ ರಚನೆಯು ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯಾಗಿದೆ ಎಂದು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '60 ವರ್ಷಗಳಿಂದ ದೇಶವನ್ನು ಲೂಟಿ ಮಾಡಿದವರು ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ಇದೀಗ India vs Bharat ಆಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಎಲ್ಲ ನಾಯಕರು ಪ್ರಧಾನಿ ಅಭ್ಯರ್ಥಿಗಳು ಎಂದು ಕರಂದ್ಲಾಜೆ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಲೇವಡಿ ಮಾಡಿದರು.

ಚಿಹ್ನೆಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ, 1950ರ ನಿಬಂಧನೆಗಳನ್ನು ಒಕ್ಕೂಟದ ಹೆಸರಾದ 'INDIA' ಉಲ್ಲಂಘಿಸುತ್ತದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹೇಳಿದರು.

'ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ' ಯೋಜನೆಗೆ ಬಜೆಟ್ ಬೆಂಬಲವಿಲ್ಲದ ಕಾರಣ, ರಾಜ್ಯದಲ್ಲಿ ಸಾರಿಗೆ ನಿಗಮಗಳನ್ನು ನಾಲ್ಕು ತಿಂಗಳಲ್ಲಿ ಮುಚ್ಚಬೇಕಾಗುತ್ತದೆ' ಎಂದು ಹೇಳಿದರು.

ಸಿರಿಧಾನ್ಯಗಳನ್ನು ಖರೀದಿಸಲು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸದೆ ‘ಅನ್ನ ಭಾಗ್ಯ’ ಯೋಜನೆಗೆ ಅಕ್ಕಿ ನೀಡಿಲ್ಲ ಎಂದು ಕೇಂದ್ರವನ್ನು ರಾಜ್ಯ ಸರ್ಕಾರ ದೂಷಿಸುತ್ತಿದೆ ಎಂದು ಅವರು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!