ಸಾಂದರ್ಭಿಕ ಚಿತ್ರ 
ರಾಜಕೀಯ

ಹಾಲಾದರೇನು? ಆಲ್ಕೋಹಾಲಾದರೇನು? ಖಜಾನೆ ತುಂಬಬೇಕಷ್ಟೇ: ಶ್ರಮಿಕರ ಕಿಸೆಗೆ ಕನ್ನ ಕೊರೆದ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ!

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ.

ಬೆಂಗಳೂರು: ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಈಗ ಹಾಲಿನ ಬೆಲೆಯನ್ನೂ ಲೀಟರಿಗೆ 3 ರು. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿ ಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಹೇಳಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT