ಡಿ ಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಸಂಚು ರೂಪಿಸಲಾಗುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಬಹುಮತದ ಸರ್ಕಾರ ಬೀಳಿಸಲು ಯೋಜನೆ ರೂಪಿಸಲಾಗುತ್ತಿದೆ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಅವರು ಸಿಂಗಾಪುರದಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಸಂಚು ರೂಪಿಸಲಾಗುತ್ತಿದೆ ಎಂದಿದ್ದಾರೆ.

ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

"ಇದೆಲ್ಲವೂ ಒಂದು ತಂತ್ರ ಮತ್ತು ನಾನು ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಬೆಂಗಳೂರಿನಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದರೆ ಸಂಚು ಬಯಲಿಗೆ ಬರುವ ಸಾಧ್ಯತೆ ಇರುವುದರಿಂದ ಸಿಂಗಾಪುರದಲ್ಲಿ ತಂತ್ರ ಮಾಡಲಾಗಿದೆ" ಎಂದು ಡಿಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!

‘ನಿರ್ಲಕ್ಷ್ಯ ಮಾಡಿದ್ರೆ ಕ್ರಮ ಖಚಿತ’: ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ತಪಾಸಣೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ!

Hanuman Ansh: ಥಿಯೇಟರ್ ಗಳಲ್ಲಿ ಭಕ್ತಿಯ ಅಲೆ, ಚಪ್ಪಲ್ಲಿ ಬಿಚ್ಚಿಟ್ಟು, ಹನುಮಾನ್ ಚಾಲೀಸಾ ಪಠಿಸಿದ ಪ್ರೇಕ್ಷಕರು! Video ವೈರಲ್