ಸಿದ್ದರಾಮಯ್ಯ ಮತ್ತು ಬಿ.ಕೆ ಹರಿಪ್ರಸಾದ್ 
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮುಖ್ಯಮಂತ್ರಿ ಸ್ಥಾನ ವಂಚಿತರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ, ಸಚಿವ ಸ್ಥಾನ ಕೈ ತಪ್ಪಿದವರನ್ನು ಒಟ್ಟುಗೂಡಿಸುವ ಮೂಲಕ ಅವರು ಕಾಂಗ್ರೆಸ್‌ನೊಳಗೆ ಸಿದ್ದರಾಮಯ್ಯ ವಿರೋಧಿ ಪಾಳೆಯವನ್ನು ಮುನ್ನಡೆಸಬಹುದು ಎಂದು ರಾಜಕೀಯ ವೀಕ್ಷಕರು ಹೇಳಿದ್ದಾರೆ.

ಅಹಿಂದ ಚಳವಳಿಯ ಮೂಲಕ ಹಿಂದುಳಿದ ವರ್ಗಗಳ ಹಿತವನ್ನು ಪ್ರತಿಪಾದಿಸುವ ಸಿದ್ದರಾಮಯ್ಯನವರನ್ನು ಎದುರಿಸಲು  ಶಕ್ತಿ ನೀಡಿದ್ದು, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ವ್ಯಾಪಕ ಪ್ರಚಾರ ಮಾಡಿದ ಕರಾವಳಿ ಪ್ರದೇಶದ ಸಮುದಾಯದೊಂದಿಗೆ ನಿಕಟ ಸಂಪರ್ಕ ಸಾಧಿಸಿದ್ದಾರೆ.

ಆದರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅಥವಾ ಮಾಜಿ ಲೋಕಸಭಾ ಸದಸ್ಯ ದಿವಂಗತ ಆರ್ ಎಲ್ ಜಾಲಪ್ಪ ಅವರಂತಹ ನಾಯಕರಿಲ್ಲದ ಈಡಿಗ ಸಮುದಾಯದ ಪ್ರಮುಖ ನಾಯಕರಾಗಿ 68 ವರ್ಷದ ಹರಿಪ್ರಸಾದ್ ಹೊರಹೊಮ್ಮುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಿದ್ದರಾಮಯ್ಯ ವಿರುದ್ಧದ ಹೇಳಿಕೆಯಿಂದ ಹರಿಪ್ರಸಾದ್ ಅವರನ್ನು ಸಮುದಾಯದ ಪ್ರಣವಾನಂದ ಸ್ವಾಮಿಗಳು ಬೆಂಬಲಿಸುತ್ತಿದ್ದಾರೆ, ಅವರ ಪ್ರಭಾವವು ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಾದ್ಯಂತ ವ್ಯಾಪಿಸಿದೆ, ಏಕೆಂದರೆ ಸಮುದಾಯದ ಸಾಕಷ್ಟು ಜನಸಂಖ್ಯೆಯು ಕೇರಳದಲ್ಲೂ ಉಳಿದಿದೆ.

ಆದರೆ ಹರಿಪ್ರಸಾದ್ ಅವರಿಗೆ ಚುನಾವಣೆಯಲ್ಲಿ ಗೆದ್ದ ಇತಿಹಾಸ ಇಲ್ಲದಿರುವುದರಿಂದ ಆ ಶಕ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದು ರಾಜಕೀಯ ಪಂಡಿತರು ಹೇಳಿದ್ದಾರೆ.

ಅವರು 1983 ರಲ್ಲಿ ಬೆಂಗಳೂರಿನ ಗಾಂಧಿ ನಗರದಿಂದ ಸೋತರು ಮತ್ತು 2019 ರಲ್ಲಿ ಬೆಂಗಳೂರು ದಕ್ಷಿಣದಿಂದ ನಡೆದ ಚುನಾವಣೆ ಸೇರಿದಂತೆ ಎರಡು ಲೋಕಸಭಾ ಚುನಾವಣೆಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಐದು ಬಾರಿ ರಾಜ್ಯಸಭೆ ಸದಸ್ಯರಾಗಿದ್ದ ಹರಿಪ್ರಸಾದ್ ಇತ್ತೀಚೆಗೆ ರಾಜ್ಯ ರಾಜಕೀಯಕ್ಕೆ ಶಿಫ್ಟ್ ಆಗಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸಚಿವ ಸ್ಥಾನ ನಿರಾಕರಿಸುವ ಮೂಲಕ ಅವರನ್ನು ದೂರವಿಡಲಾಗಿದೆ. ಇದು ಅವರ ಯುಗ ಮುಗಿದು ಹೋಗಿದೆ ಎಂಬುದರ ಸೂಚನೆಯಾಗಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಆದರೆ ಹರಿಪ್ರಸಾದ್ ಅವರು ಮುಂಬರುವ ದಿನಗಳಲ್ಲಿ ಪರಿಸ್ಥಿತಿಗಳು ಹೇಗೆ ಹೋಗುತ್ತವೆ ಎಂಬುದನ್ನು ನಿರೀಕ್ಷಿಸಿ ಮತ್ತು ವೀಕ್ಷಿಸಿ ಎಂದು ಸಂದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT