ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಲೂಟಿ ಮಾಡಿ ಓಡಿಹೋಗಿರುವ ನೀರವ್ ಮೋದಿ, ಲಲಿತ್ ಮೋದಿ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ?

ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ
Shilpa D
Updated On : 26 Jul 2023, 2:16 pm

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: "ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು

Advertisement

Advertisement

ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ ನರೇಂದ್ರ ಮೋದಿ  ಅವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್, ಪಿಎಫ್ಐಗಳಲ್ಲೂ 'ಇಂಡಿಯಾ' ಇದೆ: ಪ್ರಧಾನಿ ಮೋದಿ ಟೀಕೆ

ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments