ಕಾಂಗ್ರೆಸ್ ಶಾಸಕರು 
ರಾಜಕೀಯ

ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ: ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು!

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.

ಕೆಲ ಕಾಂಗ್ರೆಸ್ ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ. ವರ್ಗಾವಣೆಗಳು ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲವನ್ನು ಸೃಷ್ಟಿಸಿತ್ತು. ಹೀಗಾಗಿ ಇಂದು ನಡೆದ ಸಿಎಲ್ ಪಿ ಸಭೆಯಲ್ಲಿ ಎಲ್ಲವನ್ನೂ ಆಲಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ ಎಂದು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ. 

ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ ಎಂಬ ಅಸಮಾದಾನದ ಪತ್ರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇನ್ನು ಬಹಿರಂಗ ಪತ್ರ ಬರೆದಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು, ಏನೇ ಅಸಮಾಧಾನ ಇದ್ದರೂ ನನ್ನ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ ಎಂದೂ ಭರವಸೆ ನೀಡಿದ್ದಾರೆ.

ಇನ್ನು ಕೆಲ ಶಾಸಕರು ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಪ್ರಯೋಜವಿಲ್ಲ ಎಂದು ಸಭೆಯಿಂದ ಹೊರಹೋದರು. ಇನ್ನು ಕೆಲ ಶಾಸಕರು ಇವರನ್ನು ನಂಬಿ ಏನನ್ನು ಮಾಡುವುದಕ್ಕೆ ಆಗುವುದಿಲ್ಲ, ಎಲ್ಲಾ ವ್ಯರ್ಥ ಎಂದು ಕೆಲ ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel