ಅಮಿತ್ ಮಾಳವಿಯಾ 
ರಾಜಕೀಯ

ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತದೆ, ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ: ಅಮಿತ್ ಮಾಳವೀಯ

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶಾಸಕರ ಬಳಿ 'ಹಣವಿಲ್ಲ' ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶಾಸಕರ ಬಳಿ 'ಹಣವಿಲ್ಲ' ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ತನ್ನ ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣವನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. 

ಕ್ಷೇತ್ರಾಭಿವೃದ್ಧಿಗೆ ನೀಡುವ ಹಣದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಹೊಂದಿದ್ದ ಪಕ್ಷದ ಎಲ್ಲಾ ಶಾಸಕರು ಸದ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರುವಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ ಮತ್ತು ತಮ್ಮ ಕೋರಿಕೆಯಂತೆ ಸರ್ಕಾರಿ ನೌಕರರ ವರ್ಗಾವಣೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಹಕಾರ ನೀಡುತ್ತಿಲ್ಲವಾದ್ದರಿಂದ ಸಚಿವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಮಾಳವೀಯ, 'ಕಾಂಗ್ರೆಸ್ ಕರ್ನಾಟಕವನ್ನು ಹಾಳು ಮಾಡುತ್ತದೆ. 5 ಭರವಸೆಗಳು ಜಾರಿಯಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ ಮತ್ತು ಈಗ ಕ್ಷೇತ್ರಾಭಿವೃದ್ಧಿಯೂ ಆಗುವುದಿಲ್ಲ. ಹಣದ ಕೊರತೆಯಿಂದ ಜನರ ಮುಂದೆ ಹೋಗಲು ಶಾಸಕರಿಗೆ ಮುಖವಿಲ್ಲದಂತಾಗಿದೆ' ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ