ನಳಿನ್ ಕುಮಾರ್ ಕಟೀಲ್ 
ರಾಜಕೀಯ

ರಾಜ್ಯದಲ್ಲಿ 'ಜಿಹಾದಿ ಸರ್ಕಾರ' ಆಡಳಿತ ನಡೆಸುತ್ತಿದೆ: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆರೋಪಿಸಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆರೋಪಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಘಟನೆ ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕಟೀಲ್, ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಂದೂ ವಿರೋಧಿ ನೀತಿ ಹೆಚ್ಚಿದೆ ಎಂದರು.

'ಸಿದ್ದರಾಮಯ್ಯ ಸರ್ಕಾರ ಪಿಎಫ್‌ಐ ಸಂಘಟನೆಗೆ ಸೇರಿದ ಉಗ್ರರನ್ನು ಬಿಡುಗಡೆ ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೇಶ ವಿರೋಧಿ ಹಾಗೂ ಭಯೋತ್ಪಾದಕರ ಪರ ಸಿಎಂ ಆಗಿ ಬದಲಾಗಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಇದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಮಾತ್ರವಲ್ಲ ಗೃಹ ಸಚಿವರೂ ವಿಫಲರಾಗಿದ್ದಾರೆ. ಗೃಹ ಸಚಿವರು ಇದನ್ನು ಮಕ್ಕಳ ಆಟ ಎಂದು ಬಿಂಬಿಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ವಿಡಿಯೋ ತೆಗೆದವರನ್ನು ಜೈಲಿಗೆ ಕಳುಹಿಸುವ ಧೈರ್ಯ ಸಿದ್ದರಾಮಯ್ಯ ಸರ್ಕಾರಕ್ಕೆ ಇಲ್ಲ ಎಂದ ಕಟೀಲ್, ನಮ್ಮ ಕಾರ್ಯಕರ್ತೆಯ‌ನ್ನ ಟ್ವೀಟ್ ಮಾಡಿದ ಕಾರಣಕ್ಕೆ ಜೈಲಿಗೆ ಹಾಕುತ್ತಾರೆ. ಆದರೆ ಜಿಹಾದಿಗಳನ್ನ, ವಿಡಿಯೋ ಮಾಡಿದವರನ್ನ ಹಾಗೂ ಹತ್ಯೆ ಮಾಡಿದವರನ್ನ ಜೈಲಿಗೆ ಹಾಕುವ ತಾಕತ್ತು ಸಿದ್ದರಾಮಯ್ಯಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಿಡಿಸಿದರು.

‘ಕಾಂಗ್ರೆಸ್ ಗೆದ್ದ ನಂತರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ದೇಶವಿರೋಧಿಗಳನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಅವರನ್ನು ಬಂಧಿಸಬೇಕು ಎಂದು ಕಟೀಲ್ ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ