ಶಿವಕುಮಾರ್ ಉದಾಸಿ 
ರಾಜಕೀಯ

ಚುನಾವಣಾ ರಾಜಕೀಯಕ್ಕೆ ಶಿವಕುಮಾರ ಉದಾಸಿ ವಿದಾಯ: ಪಕ್ಷದಲ್ಲಿ ಬಿಸಿ ಬಿಸಿ ಚರ್ಚೆ

ಗದಗ–ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹಾವೇರಿ: ಗದಗ–ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. 2009, 2014 ಮತ್ತು 2019ರ ಮೂರು ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು.

2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಇವರು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆಘಾತ ಮತ್ತು ಅಚ್ಚರಿ ತಂದಿದೆ. ಕಳೆದ ಒಂದು ವರ್ಷದ ಹಿಂದೆಯೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಬಗ್ಗೆ ನಮ್ಮ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ.

ನನ್ನ ಖಾಸಗಿ ವ್ಯವಹಾರಗಳ ಜವಾಬ್ದಾರಿ ಮತ್ತು ವೈಯಕ್ತಿಕ ಕಾರಣದಿಂದ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ತೀರ್ಮಾನಿಸಿದ್ದೇನೆ. ಹೀಗಾಗಿ, ನಾನು 2024ರ ಲೋಕಸಭಾ ಚುನಾವಣೆಯ ಆಕಾಂಕ್ಷಿಯಾಗಿಲ್ಲ ಎಂದು ಸಂಸದ ಶಿವಕುಮಾರ ಉದಾಸಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT