ಸಂಗ್ರಹ ಚಿತ್ರ 
ರಾಜಕೀಯ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆಗಿಂದು ಬಿಜೆಪಿ ಮಹತ್ವದ ಸಭೆ: ಅಭಿಪ್ರಾಯ ಸಂಗ್ರಹ, ವರಿಷ್ಠರಿಂದ ಅಂತಿಮ ನಿರ್ಧಾರ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ,

ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆಗೂ ತಿಣುಕಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ತೆರವಾಗಿರುವ ಸ್ಥಾನವನ್ನು ಬಿಜೆಪಿ ಭರ್ತಿ ಮಾಡುವ ನಿರೀಕ್ಷೆ ಇದೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಇಂದು ಒಟ್ಟು ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!