ಸಿ.ಟಿ ರವಿ 
ರಾಜಕೀಯ

ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲು: ಸಿಟಿ ರವಿ

ಕೆಲವರ ರಾಜಿ ರಾಜಕಾರಣದಿಂದ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಕೆಲವರ ರಾಜಿ ರಾಜಕಾರಣದಿಂದ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ, ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆದರೆ ಆರ್​ಎಸ್​ಎಸ್​ ನಾಯಕರದ್ದು ಓದಬಾರದಾ? ಎಂದು ಪ್ರಶ್ನಿಸಿದರು.

ಇವರು ಪಠ್ಯದಿಂದ ಆರ್ ಎಸ್ಎಸ್ ನಾಯಕರನ್ನು ಹೊರಹಾಕಬಹುದು. ಆದರೆ ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ. ಆರ್​ಎಸ್​ಎಸ್​ ವಿಚಾರದಲ್ಲಿ ನೆಹರು, ಇಂದಿರಾ ಗಾಂಧಿ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

SCROLL FOR NEXT