ಎಂಟಿಬಿ ನಾಗರಾಜ್ 
ರಾಜಕೀಯ

ಬಿಜೆಪಿ ನೋಟು-ಕಾಂಗ್ರೆಸ್ ಗೆ ವೋಟು; 'ಕುರಾನ್' ಮೇಲೆ ಆಣೆ ಮಾಡಿ ವಂಚನೆ; ಬೊಮ್ಮಾಯಿಯಿಂದಲೂ ನನಗೆ ಮೋಸ!

ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ, ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಸಹ ಕಾರಣ. ಅವರೂ ನನಗೆ ಮೋಸ ಮಾಡಿದರು.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ, ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಸಹ ಕಾರಣ. ಅವರೂ ನನಗೆ ಮೋಸ ಮಾಡಿದರು. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ಹೊಸಕೋಟೆ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಟಿ.ಬಿ ನಾಗರಾಜ್‌ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್‌ ಅವರಿಗೆ ನೀಡಿದರು. ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸುವರ್ಣ ಅವಕಾಶ ತಪ್ಪಿಸಿ ಮೋಸ ಮಾಡಿದರು’ ಎಂದು ಹರಿಹಾಯ್ದರು.

‘ಹೋಸಕೋಟೆ ತಾಲ್ಲೂಕಿನ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ಸರ್ಕಾರದಲ್ಲಿ ಸ್ಥಾನಮಾನ ನೀಡಲಿಲ್ಲ. ಸ್ಥಳೀಯ ಕೆಲವರಿಗಾದರೂ ಅವಕಾಶ ನೀಡಿದ್ದಿದ್ದರೆ ನನ್ನ ಕೈ ಮತ್ತಷ್ಟು ಬಲಗೊಳ್ಳುತ್ತಿತ್ತು. ಆದರೆ ಹಾಗಾಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಆರಂಭದಿಂದ ಕೊನೆಯವರೆಗೂ ನೋವಿನಿಂದ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಯಾರ‍್ಯಾರು ಕಾರಣ ಎಂದು ಹೇಳಿದರು. ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಂತರ ಕ್ಷೇತ್ರದ ಮುಸ್ಲಿಮರನ್ನು ತರಾಟೆಗೆ ತೆಗೆದುಕೊಂಡರು.

ಹೋಸಕೋಟೆ ಕ್ಷೇತ್ರ ಮುಸ್ಲಿಂ ಸಮುದಾಯದ ವಿರುದ್ದವೂ ತರಾಟೆಗೆ ತೆಗೆದುಕೊಂಡ ಅವರು, ನಾನು ಅಪಾರವಾಗಿ ನಂಬಿದ್ದ ಕ್ಷೇತ್ರದ ಅಲ್ಪಸಂಖ್ಯಾತರು ಕೂಡ ಚುನಾವಣೆಯಲ್ಲಿ ನನಗೆ ಮೋಸ ಮಾಡಿದರು. ನನ್ನ ಕ್ಷೇತ್ರದ ಅಲ್ಪಸಂಖ್ಯಾತರಿಗೆ ನಾನು ನನ್ನ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ. ಆದರೂ, ಅವರು ನನಗೆ ಮೋಸ ಮಾಡಿದರು.

ನನಗೇ ಮತ ನೀಡುವುದಾಗಿ ಕುರಾನ್ ಮತ್ತು ಅಲಾ ವಿನ ಮೇಲೆಯೂ ಆಣೆ, ಪ್ರಮಾಣ ಮಾಡಿದ್ದ ಅವರು ನನಗೆ ಮತ ನೀಡದೆ ಮೋಸ ಮಾಡಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕಲಿಲ್ಲ. ಬಿಜೆಪಿ ನೀಡಿದ ನೋಟು ಪಡೆದು ಅವರು ಕಾಂಗ್ರೆಸ್‌ಗೆ ವೋಟು ಹಾಕಿದರು. ಇನ್ನೆಂದಿಗೂ ನಾನು ಅವರನ್ನು ನಂಬುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein files: ನ್ಯಾಯಾಂಗ ಇಲಾಖೆ ವೆಬ್‌ಪುಟದಿಂದ ಟ್ರಂಪ್ ಫೋಟೋ ಸೇರಿ ಕನಿಷ್ಠ 16 ದಾಖಲೆಗಳು ಕಣ್ಮರೆ..!

ಚಳಿಗಾಲದ ಅಧಿವೇಶನ ಮುಕ್ತಾಯ: 2026-27ನೇ ಸಾಲಿನ ರಾಜ್ಯ ಬಜೆಟ್'ಗೆ ಸಿದ್ದರಾಮಯ್ಯ ಸಿದ್ಧತೆ: ಈ ಬಾರಿ ಬಜೆಟ್ ಗಾತ್ರ, ಸಾಲ ಪ್ರಮಾಣ ಹೆಚ್ಚಳ ಸಾಧ್ಯತೆ..!

ಸಿದ್ದು ಅತ್ಯಾಪ್ತ ರಾಜಣ್ಣ ಭೇಟಿಯಾದ ಡಿಕೆ ಶಿವಕುಮಾರ್, ಏನಿದರ ಗುಟ್ಟು?

ಸಿಎಂ ಪಟ್ಟಕ್ಕೆ ಪರಮೇಶ್ವರ್ ಹೆಸರು?: ಹೊಸ ದಾಳ ಉರುಳಿಸಲು ಸಿದ್ದು ಬಣ ಸಜ್ಜು..!

ರಾಜ್ಯದಲ್ಲಿ ಚಳಿಯೋ ಚಳಿ; ಉತ್ತರ ಒಳನಾಡಿನ ಜಿಲ್ಲೆಗಳಿಗೆ 'Orange' ಅಲರ್ಟ್‌ ಘೋಷಣೆ

SCROLL FOR NEXT