ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ನನಗೆ ರಾಜಕಾರಣದಲ್ಲಿ ಒಲವಿಲ್ಲ, ಕಳೆದ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಮನಸ್ಸಿರಲಿಲ್ಲ, ಆದರೆ....!

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಮಾತನಾಡಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ.

ಎಚ್.ಡಿ ಕುಮಾರಸ್ವಾಮಿ
Shilpa D
Updated On : 12 Jun 2023, 3:53 pm

ಚನ್ನಪಟ್ಟಣ: ನನಗೆ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ, ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದು ಮಾಜಿ ಸಿ ಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಷ್ಟ್ರ ರಾಜಕಾರಣದ ಸ್ಪರ್ಧೆ ಬಗ್ಗೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಅವರು, ನನಗೆ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ, ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನನ್ನದು ಬಿಡಿ ಹಾಲಿ ಸಂಸದರ ಕಥೆ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳುತ್ತಿರುವಾಗ ನಮ್ದೆಲ್ಲಾ ಯಾವ ಲೆಕ್ಕ ಎಂದು ಹೇಳಿದರು. ಈ ಮೂಲಕ ರಾಜಕಾರಣ ಸಾಕಾಗಿದೆ ಎಂದಿದ್ದ ಸಂಸದ ಡಿಕೆ ಸುರೇಶ್‌ಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಮಾತನಾಡಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡ್ತಿದ್ದೇವೆ ಎಂದು ತಿಳಿಸಿದರು.

Advertisement

Advertisement

ಇದನ್ನೂ ಓದಿ: ಕಣ್ಮುಂದೆ ಕಾಣುತ್ತಿದೆ ಕರಾಳ ಭವಿಷ್ಯ: ದಳಪತಿಗಳ ನಿದ್ದೆಗೆಡಿಸಿರುವ ಸಿದ್ದು; ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸಖ್ಯ ಬಯಸಿರುವ ಜೆಡಿಎಸ್!

ಕಾಂಗ್ರೆಸ್ ವಿರುದ್ಧ 640 ಕೋಟಿ ರೂ. ಭ್ರಷ್ಟಾಚಾರ ಆರೋಪ ವಿಚಾರದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ನೀವು ಬಿಜೆಪಿ ವಿರುದ್ಧ 40% ಕಮಿಷನ್‌ ಸರ್ಕಾರ ಎಂದು ಡಂಗೂರ ಸಾರಿದ್ರಲ್ಲ. ಯಾವ ಸಾಕ್ಷಿ ಇಟ್ಟಿದ್ರಿ? ಅವನ್ಯಾರೋ ಗುತ್ತಿಗೆದಾರ ದೂರು ಕೊಟ್ರಲ್ಲ, ಅವರು ಸಾಕ್ಷಿ ಇಟ್ಟಿದ್ರಾ? ಎಂದು ಪ್ರಶ್ನಿಸಿದರು.

40% ಕಮಿಷನ್‌ ಬಗ್ಗೆ ಆರೋಪಿಸಿದ್ರಲ್ಲ ಯಾಕೆ ಲೋಕಾಯುಕ್ತಕ್ಕೆ ದೂರು ಕೊಡಲಿಲ್ಲ. ಈಗ ಅಧಿಕಾರದಲ್ಲಿದ್ದೀರಲ್ಲಾ ಅದರ ಬಗ್ಗೆ ತನಿಖೆ ಮಾಡಿಸಿ ಎಂದರು. ಅಕ್ರಮದ ಬಗ್ಗೆ ತನಿಖೆ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಎಷ್ಟರಮಟ್ಟಿಗೆ ತನಿಖೆ ಮಾಡ್ತಾರೋ ನೋಡೊಣ. ಅವರೇ ಅಧಿಕಾರದಲ್ಲಿದ್ದಾರೆ. ತನಿಖೆ ಮಾಡಲಿ ಯಾರು ಬೇಡ ಅಂತಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement