ರಮೇಶ್ ಜಿಗಜಿಣಗಿ 
ರಾಜಕೀಯ

'ಹೊಸಬರಿಗೆ ಟಿಕೆಟ್‌' ಐಡಿಯಾ ಕೊಟ್ಟವರನ್ನು ನೇಣಿಗೆ ಹಾಕಿ; ಆ ಹುಡುಗ, ಆ ಹುಡುಗಿ ಅವರೇನು ನಾಯಕರೇ: ರಮೇಶ ಜಿಗಜಿಣಗಿ

ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ವಿಜಯಪುರ: ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 70ಕ್ಕೂ ಹೆಚ್ಚು ಜನ ಹೊಸಬರಿಗೆ ಟಿಕೆಟ್‌ ನೀಡಲಾಗಿತ್ತು. ಅದರಲ್ಲಿ ಗೆದ್ದವರು ಬೆರಳಣಿಕೆಯಷ್ಟು ಜನ ಮಾತ್ರ.

ಹಿರಿಯರಿಗೆ ಟಿಕೆಟ್‌ ಕೊಟ್ಟಿದ್ದರೆ ಎಲ್ಲರೂ ಗೆಲ್ಲುತ್ತಿದ್ದರು. ಆಗ 130ಕ್ಕೂ ಹೆಚ್ಚು ಸೀಟ್‌ಗಳಲ್ಲಿ ಬಿಜೆಪಿ ಗೆದ್ದು ಬಹುಮತ ಸಾಧಿಸುತ್ತಿತ್ತು. ಹೊಸಬರಿಗೆ ಬಿಜೆಪಿ ಟಿಕೆಟ್‌ ಕೊಡುವ ಔಚಿತ್ಯ ಇರಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಅದರಲ್ಲೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಜಗದೀಶ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ  ಅವರು ಪಕ್ಷ ಬಿಟ್ಟು ಹೋಗಿರುವುದು, ಕಾಂಗ್ರೆಸ್‌ನ ಗ್ಯಾರಂಟಿ ಅಬ್ಬರದ ಪರಿಣಾಮ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು.

ಆದರೆ, ಕಾಂಗ್ರೆಸ್‌ನ ಗ್ಯಾರಂಟಿ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಆ ಹುಡುಗ, ಆ ಹುಡುಗಿ ಅವರೇನು ನಾಯಕರೇ ಎಂದು ಪರೋಕ್ಷವಾಗಿ ರಾಹುಲ್‌, ಪ್ರಿಯಾಂಕಾ ಗಾಂಧಿ ವಿರುದ್ಧ ಜಗಜಿಣಗಿ ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT