ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಎಕ್ಸ್‌ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ: ನೆಲೆ ಕಳೆದುಕೊಂಡವರು ನಮ್ಮ ರೈತರು; ಸುಲಿಗೆಗೆ ಒಳಗಾಗುತ್ತಿರುವವರು ಕನ್ನಡಿಗರು'

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್‌ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರಿಸಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ  ದೂರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಕ್ಸ್‌ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರ್ಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ ಶೇ 20ರಷ್ಟು ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

 ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್‌ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರಿಸಿವೆ’ ಎಂದು ದೂರಿದ್ದಾರೆ.

‘ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರು. ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ಹೆದ್ದಾರಿಯಲ್ಲಿ ಹಗಲು ದರೋಡೆಯಷ್ಟೇ ಸರಿ’ ಎಂದು ಟೀಕಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ’ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕು. ಬೆಲೆ ಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ಬಿಜೆಪಿ ಸರ್ಕಾರದ ದಾರಿಯಲ್ಲಿಯೇ ಈ ಸರ್ಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ ಎಂದು ಅವರು ಕುಟುಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT