ಜಗದೀಶ್ ಶೆಟ್ಟರ್ 
ರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಕಾಂಗ್ರೆಸ್ ಟಿಕೆಟ್

ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ...

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್ ನೀಡಿದೆ.

ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಜಗದೀಶ್‌ ಶೆಟ್ಟರ್ ಅವರಿಗೆ,  ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರಿಗೆ ಕರ್ನಾಟಕ ವಿಧಾನ ಪರಿಷತ್‌ ಸ್ಥಾನಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ.

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT