ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ 
ರಾಜಕೀಯ

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ರಾಜ್ಯ‌ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ರಾಜ್ಯ‌ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.

ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ ಅಭ್ಯರ್ಥಿಯಾಗಿ ತಿಪ್ಪಣ್ಣಪ್ಪ ಕಮಕನೂರು ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT