ರಾಜಕೀಯ

ಜುಲೈ 3ರ ಒಳಗೆ ಪ್ರತಿಪಕ್ಷ ನಾಯಕನ ಆಯ್ಕೆ: ಮಾಜಿ ಸಿಎಂ ಸದಾನಂದಗೌಡ

Lingaraj Badiger

ಚಾಮರಾಜನಗರ: ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ ಹೇಳಿದ್ದಾರೆ.

ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ ಮಾಡಲಾಗುವುದು ಎಂದರು.

ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರಿಗೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ನಾವು ಕೊಡುತ್ತೇವೆ. ಅಳೆದು ತೂಗಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದರು.

ಜುಲೈ 3ರಿಂದ 10 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿದ್ದರಾಮಯ್ಯನವರು ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಅಧಿವೇಶನ ಆರಂಭಕ್ಕೂ ಮುನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್​ ಮುಂದಾಗಿದೆ. ಹೀಗಾಗಿ ಯಾರನ್ನು ಮಾಡಿದರೆ ಸೂಕ್ತ ಎಂದು ಬೇರೆ ಬೇರೆ ಮಾರ್ಗಗಳಲ್ಲಿ ಚಿಂತನೆ ನಡೆಸಿದೆ. ಅಲ್ಲದೇ ಪಕ್ಷದ ಇತರೆ ನಾಯಕರುಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ ಎನ್ನಲಾಗಿದೆ.

SCROLL FOR NEXT