ಬಿಜೆಪಿ 
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!

ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.

ಮಂಗಳೂರು: ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 30ರವರೆಗೆ ರಾಜ್ಯದಾದ್ಯಂತ ಜಾಗೃತಿ ಜಾಥಾ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಏಳು ತಂಡಗಳನ್ನು ರಚಿಸಲಾಗಿದೆ. ಹಲವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕೇಂದ್ರ ಸರ್ಕಾರವು 2014 ರಿಂದ ವಿವಿಧ ಯೋಜನೆಗಳ ಅನುಷ್ಠಾನದ ಮೂಲಕ 'ಸುಧಾರಣೆಗಳು, ಕಾರ್ಯಕ್ಷಮತೆ ಮತ್ತು ಪರಿವರ್ತನೆ'ಯನ್ನು ತಂದಿದೆ. ಜಿಎಸ್‌ಟಿ ಮೂಲಕ ದಾಖಲೆಯ ತೆರಿಗೆ ಸಂಗ್ರಹವಾಗಿದೆ ಮತ್ತು ಈ ಅವಧಿಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 74 ರಿಂದ 141 ಕ್ಕೆ ಏರಿದೆ ಎಂದು ಅವರು ಹೇಳಿದರು.

ಈ ಅವಧಿಯಲ್ಲಿ 14 ಐಐಎಂಗಳು, 25 ಏಮ್ಸ್ ಆಸ್ಪತ್ರೆಗಳು, 225 ವೈದ್ಯಕೀಯ ಕಾಲೇಜುಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ ನಂತರದ ಭಾರತವು ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮಲು ಮುಂದೆ ಸಾಗಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಸರ್ಕಾರದ ಸಾಧನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು. 

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆರಗ ಜ್ಞಾನೇಂದ್ರ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT