ಎಂ.ಟಿ ಬಿ ನಾಗರಾಜ್ 
ರಾಜಕೀಯ

ಅವನು ಸೋತ, ನಮ್ಮನ್ನೂ ಸೋಲಿಸಿದ: ಮತ್ತೆ ಮಾಜಿ ಸಚಿವ ಕಿಡಿ, ಸೋಲಿನಿಂದ ಹೊರಬಾರದ ಎಂಬಿಟಿ ನಾಗರಾಜ್!

ಮಾಜಿ ಸಚಿವ ಎಂಟಿಬಿ ನಾಗರಾಜ್ ಸೋಲಿನಿಂದ ಆಚೆ ಬಂದಂತೆ ಕಾಣುತ್ತಿಲ್ಲ. ಪದೇ ಪದೇ ತಮ್ಮ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.

ಬೆಂಗಳೂರು: ಮಾಜಿ ಸಚಿವ ಎಂಟಿಬಿ ನಾಗರಾಜ್ ಸೋಲಿನಿಂದ ಆಚೆ ಬಂದಂತೆ ಕಾಣುತ್ತಿಲ್ಲ. ಪದೇ ಪದೇ ತಮ್ಮ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಜೂನ್ 25 ರಂದು ನಡೆದ ಆತ್ಮಾವಲೋಕನ ಸಭೆಯಲ್ಲೂ ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ತಮ್ಮ ಸೋಲಿಗೆ ಮಾಜಿ ಸಚಿವ ಡಾ. ಕೆ.ಸುಧಾಕರ್ ಕಾರಣ ಎಂದು ನೇರವಾಗಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಇದೇ ವೇಳೆ ಸೋಲಿಗೆ ಹಲವು ಕಾರಣಗಳನ್ನೂ ಸಹ ನೀಡಿದ್ದು, ಅದು ಈ ಕೆಳಗಿನಂತಿದೆ ನೋಡಿ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಕಾಂಗ್ರೆಸ್​ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಡಾ. ಕೆ.ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಡಾ. ಕೆ.ಸುಧಾಕರ್​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ.ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್​ನಿಂದಾಗಿಯೇ ನಾನು ಸೋತಿದ್ದು ಎಂದು ಎಂಟಿಬಿ ನಾಗರಾಜ್ ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬಗ್ಗು ಬಡಿದ ವೆಸ್ಟ್ ಇಂಡೀಸ್, 30 ರನ್ ಭರ್ಜರಿ ಜಯ

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಬಳ್ಳಾರಿ NMDC ಕಬ್ಬಿಣದ ಅದಿರು ಕಳ್ಳಸಾಗಣೆ: ತನಿಖೆಗೆ ಸರ್ಕಾರ ಆದೇಶ, ಎಸ್ ಪಿ ಹೇಳಿದ್ದೇನು?

SCROLL FOR NEXT