ಮಾಜಿ ಸಿಎಂ ಬೊಮ್ಮಾಯಿ 
ರಾಜಕೀಯ

ಮೋದಿ ಸೋಲಿಸುವುದಷ್ಟೇ ಅವರ ಉದ್ದೇಶ: ವಿಪಕ್ಷಗಳ ಸಭೆ ವಿರುದ್ಧ ಬೊಮ್ಮಾಯಿ ವಾಗ್ದಾಳಿ

2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸುವ ಕುರಿತಷ್ಟೇ ಚರ್ಚೆ ಮಾಡಿದ್ದಾರೆಯೇ ಹೊರತು ದೇಶದ ಪ್ರಗತಿಯ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ವಾಗ್ದಾಳಿ ನಡೆಸಿದರು.

ಬೆಳಗಾವಿ: 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸುವ ಕುರಿತಷ್ಟೇ ಚರ್ಚೆ ಮಾಡಿದ್ದಾರೆಯೇ ಹೊರತು ದೇಶದ ಪ್ರಗತಿಯ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ವಾಗ್ದಾಳಿ ನಡೆಸಿದರು.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋಲಲ್ಲ. ರಾಹುಲ್ ಗಾಂಧಿಗೆ ಮದುವೆ ಆಗೋದಿಲ್ಲ. ಮೋದಿಗೆ ಪರ್ಯಾಯವಾಗಿ ಒಬ್ಬ ನಾಯಕನ ಸೃಷ್ಟಿ ಮಾಡಲಾಗದಿರುವ ನಿಮ್ಮನ್ನು ಜನ ಹೇಗೆ ಆಯ್ಕೆ ಮಾಡುತ್ತಾರೆ. ಮೋದಿ ಅವರಿಗೆ ಇಡೀ ದೇಶದಲ್ಲಿ ಎದುರಿಗೆ ನಿಲ್ಲುವಂತ ಒಬ್ಬನೇ ಒಬ್ಬ ನಾಯಕ ಯಾವುದೇ ವಿರೋಧ ಪಕ್ಷದಲ್ಲಿಲ್ಲ. ಮೋದಿ ನಾಯಕತ್ವ ಇಡೀ ದೇಶ ಒಪ್ಪಿಕೊಂಡಿದೆ. ಹೀಗಾಗಿ ಲೋಕಸಭೆಯಲ್ಲಿ ಕಾಂಗ್ರೆಸ್​ ಗೆಲ್ಲಲು ಸಾಧ್ಯವಿಲ್ಲ. 25 ಸ್ಥಾನ ಮತ್ತೆ ರಾಜ್ಯದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮಕೃಷ್ಣ ಹೆಗಡೆ ಅವರು ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಅವರು ಸರ್ಕಾರವನ್ನು ವಿಸರ್ಜಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಮತ್ತೆ ಬಹುಮತದಿಂದ ಹೆಗಡೆ ಸರ್ಕಾರ ಅಧಿಕಾರಕ್ಕೆ ಬಂದಿತು. ಅದೇ ರೀತಿ 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆದರೂ ನಾವು‌ 18 ಸ್ಥಾನ ಗೆದ್ದಿದ್ದೆವು. ಇದಾದ ಬಳಿಕ‌ 2019ರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದರೂ 28ರಲ್ಲಿ 25 ಸ್ಥಾನಗಳನ್ನು ಗೆದ್ದಿದ್ದೆವು. ಹೀಗಾಗಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ವಿಚಾರಗಳು ಬೇರೆ ಬೇರೆಯಾಗಿರುತ್ತವೆ. ಆದ್ದರಿಂದ ಎಲ್ಲರೂ ಸಂಕಲ್ಪ ಮಾಡಬೇಕು, 28ಕ್ಕೆ 28 ಸ್ಥಾನ ಗೆಲ್ಲಬೇಕು. ಬೆಳಗಾವಿ ಲೋಕಸಭೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ತಾವೆಲ್ಲಾ ಪಣ ತೊಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

2004 ಮತ್ತು 2014 ರ ನಡುವೆ ಯುಪಿಎ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಿದ್ದವು. ಆದರೆ, ಬಿಜೆಪಿ ಅಧಿಕಾರಕ್ಕ ಬಂದ ಬಳಿಕಪ್ರಧಾನಿ ಮೋದಿ ಪಾಕಿಸ್ತಾನದ ದುರಹಂಕಾರವನ್ನು ನಾಶಪಡಿಸಿದರು ಎಂದರು.

‘ವಿವೇಚನೆ ಇಲ್ಲದೇ ಕಾಂಗ್ರೆಸ್‌ನವರು ಉಚಿತ ಅಕ್ಕಿ ಘೋಷಿಸಿದ್ದಾರೆ. ಅಕ್ಕಿ ಖರೀದಿಯಲ್ಲಿ ಕೆಲ ಸಚಿವರು ‘ಪರ್ಸೆಂಟೇಜ್‌’ ಹಂಚಿಕೊಳ್ಳುತ್ತಿದ್ದಾರೆ. ಖರೀದಿಯಲ್ಲಿ ಏನೆಲ್ಲ ಹುನ್ನಾರ ನಡೆದಿದೆ ಎಂದು ನನಗೆ ಗೊತ್ತಿದೆ. ಶೀಘ್ರದಲ್ಲೇ ಇವರ ಕರಾಳ ಮುಖ ಬಯಲಾಗುತ್ತದೆ. ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡಿದೆ. ಶಕ್ತಿ ಯೋಜನೆಯಿಂದಾಗಿ ರಾಜ್ಯದಲ್ಲಿ ರಸ್ತೆ ಸಾರಿಗೆ ನಿಗಮಗಳೂ ಬಂದ್ ಆಗಲಿವೆ. ಮಳೆ ಇಲ್ಲ... ಜಲಾಶಯಗಳೆಲ್ಲ ಖಾಲಿ. ಆದರೆ, ಸರಕಾರ ಮಾತ್ರ ಇದರ ಬಗ್ಗೆ ಯೋಚಿಸುತ್ತಿಲ್ಲ. ಕೇಂದ್ರದ ಮೇಲೆ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸುವ ಕಾಂಗ್ರೆಸ್‌ಗೆ ಅದರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಬಿಜೆಪಿಯ ಸೋಲಿನ ಸಂಪೂರ್ಣ ಹೊಣೆಯನ್ನು ನಾನೇ ಹೊರುತ್ತೇನೆ. ನನ್ನ ಸರ್ಕಾರ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿತ್ತು. ನೀರಾವರಿ ಯೋಜನೆಗಳಿಗೆ 5,500 ಕೋಟಿ ಮೀಸಲಿಟ್ಟಿದ್ದೆವು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನೂ ನೀಡಿದ್ದೆವೆು. ಆದರೆ, ನಾವು ಜಾರಿಗೊಳಿಸಿದ ಎಲ್ಲಾ ಉತ್ತಮ ಕೆಲಸಗಳನ್ನು ಜನರಿಗೆ ಸೂಕ್ತ ರೀತಿಯಲ್ಲಿ ಜಾಗೃತಿ ಮೂಡಿಸುವಲ್ಲಿ ವಿಫಲರಾದೆವು ಎಂದು ಬೇಸರ ವ್ಯಕ್ತಪಡಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT