ಕೆ.ಎಸ್ ಈಶ್ವರಪ್ಪ 
ರಾಜಕೀಯ

ಸರ್ಕಾರಿ ನೌಕರರ ಪ್ರತಿಭಟನೆಗೆ ಯಡಿಯೂರಪ್ಪ ಕುತಂತ್ರ ಕಾರಣ: ಕಾಂಗ್ರೆಸ್ ಟ್ವೀಟ್ ಗೆ ಈಶ್ವರಪ್ಪ ತಿರುಗೇಟು

ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಅನ್ನೋದು ಕುತಂತ್ರ ಎಂಬ ಕಾಂಗ್ರೆಸ್ ಟ್ವೀಟ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಮೈಸೂರು: ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಅನ್ನೋದು ಕುತಂತ್ರ ಎಂಬ ಕಾಂಗ್ರೆಸ್ ಟ್ವೀಟ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಕಿತ್ತಾಟ ಇದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಬಯಸುತ್ತಿದ್ದಾರೆ.

ಇನ್ನು ಯಡಿಯೂರಪ್ಪ ಅವರ ರಾಜೀನಾಮೆ ಕುರಿತು ‘ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇವರೆಲ್ಲರನ್ನ ಅನಾರೋಗ್ಯ ಕಾರಣದಿಂದ ಕೆಳಗಿಳಿಸಲಿಲ್ಲ. ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಅವರಂತಹ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ, ರಾಜೀವ್ ಗಾಂಧಿ ನೇರವಾಗಿ ಏರ್ ಪೋರ್ಟ್​ನಿಂದ ಅಪಮಾನ ಮಾಡಿ ಇಳಿಸಿದ್ರು. ಯಡಿಯೂರಪ್ಪನವರು ಅವರೇ ರಾಜೀನಾಮೆ ಕೊಟ್ಟಿದ್ದಾರೆ.

ಇವೆರೆಡಕ್ಕೂ ಬಹಳ ವ್ಯತ್ಯಾಸ ಇದೆ. ರಾಜಕೀಯ ಕುತಂತ್ರದಿಂದ ಈ ರೀತಿ ಹೇಳಿಕೆಗಳನ್ನ ಕಾಂಗ್ರೆಸ್​ ನವರು ಹೇಳುತ್ತಿದ್ದಾರೆ. ವೀರೇಂದ್ರ ಪಾಟೀಲ್ ಅವರು ಎಂತಹ ಆಡಳಿತಗಾರರು ಎಂದು ಎಲ್ಲರಿಗೂ ಗೊತ್ತು. ಶಿವಮೊಗ್ಗ ಜನರು ಅವರ ಹೆಸರಿನಲ್ಲಿಯೇ ನೀರು ಕುಡಿತಾ ಇದ್ದಾರೆ. ರಾಜ್ಯದ ಜನ ಎಲ್ಲವನ್ನು ನೋಡಿದ್ದಾರೆ ಎಂದು ಕಾಂಗ್ರೆಸ್ ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಮುಷ್ಕರ ಕುರಿತು ಮಾತನಾಡಿದ ಅವರು ‘ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ, ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ ಏನು ಹೇಳೋದು? ಎಂದು ಮೈಸೂರಿನಲ್ಲಿ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆಗೆ  ಟಿಕೆಟ್ ನೀಡುವುದು ಮತ್ತು ಸರ್ಕಾರದಲ್ಲಿ ಖಾತೆಗಳನ್ನು ಹಂಚಿಕೆ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಹಿರಿಯ ನಾಯಕ ಈಶ್ವರಪ್ಪ ಹೇಳಿದರು. ಎಲ್ಲಾ 224 ಶಾಸಕರು ಸಚಿವರಾಗಲು ಸಾಧ್ಯವಿಲ್ಲ ಎಂದು  ತಿಳಿದಿರಬೇಕು ಎಂದು ಅವರು ಹೇಳಿದರು. ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ರಾಷ್ಟ್ರ ಅಥವಾ ರಾಜ್ಯ ಮಟ್ಟದಲ್ಲಿ ನಾಯಕರಿಲ್ಲ ಅಥವಾ ಚುನಾವಣೆಯಲ್ಲಿ ಅವರಿಗೆ ಮೇಲುಗೈ ಸಾಧಿಸಲು ಕಾರ್ಯಕರ್ತರಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್