ಎಂಎಂ ಹಿಲ್ಸ್‌ನಲ್ಲಿ ಬುಧವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ಇತರ ಮುಖಂಡರು. 
ರಾಜಕೀಯ

ಕಾಂಗ್ರೆಸ್‌ನ ವಂಶಾಡಳಿತ, ಜಾತಿ ರಾಜಕಾರಣವನ್ನು ಕೊನೆಗಾಣಿಸಿ: ಮತದಾರರಿಗೆ ಜೆಪಿ ನಡ್ಡಾ ಮನವಿ

ಬಿಜೆಪಿಯ 20 ದಿನಗಳ ವಿಜಯ ಸಂಕಲ್ಪ ಯಾತ್ರೆಗೆ ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಚಾಲನೆ ನೀಡಿದ್ದು, ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರು: ಬಿಜೆಪಿಯ 20 ದಿನಗಳ ವಿಜಯ ಸಂಕಲ್ಪ ಯಾತ್ರೆಗೆ ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಚಾಲನೆ ನೀಡಿದ್ದು, ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಕಾಂಗ್ರೆಸ್'ನ ವಂಶಾಡಳಿತ, ಜಾತಿ ರಾಜಕಾರಣವನ್ನು ಕೊನೆಗಾಳಿಸಿ, ದೇಶದ ಸಮಗ್ರ ಬೆಳವಣಿಗೆಗೆ ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಜೆಪಿ ನಡ್ಡಾ ಅವರು ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಗಿರಿಧಾಮದಲ್ಲಿನ ಬುಡಕಟ್ಟು ಸಮುದಾಯಗಳ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಮೋದಿ ಅವರು 2014 ರಿಂದ ದೇಶದ ಅಭಿವೃದ್ಧಿಯ ಮುಖವನ್ನು ಬದಲಾಯಿಸಿದ್ದಾರೆ, ಇಂದು ವಿಶ್ವದ ಇತರೆ ದೇಶಗಳು ಭಾರತದತ್ತ ನೋಡುವಂತೆ ಮಾಡಿದ್ದಾರೆ.ಬ್ರಿಟನ್ ಅನ್ನು ಹಿಂದಿಕ್ಕಿ ಭಾರತವು ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ವಿಶ್ವದ ಡಿಜಿಟಲ್ ವಹಿವಾಟುಗಳಲ್ಲಿ 40 ಪ್ರತಿಶತದಷ್ಟು ವಹಿವಾಟು ಭಾರತದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

"ನಮ್ಮ ದೇಶವು ಆಟೋಮೊಬೈಲ್ ಕ್ಷೇತ್ರ, ಮೊಬೈಲ್ ಫೋನ್ ಉತ್ಪಾದನೆ, ಫಾರ್ಮಸಿಯಲ್ಲಿ ಅದ್ಭುತಗಳನ್ನು ಮಾಡಿದೆ. ಇದು ದೇಶದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಿದೆ. ಮೋದಿ ಯಾವಾಗಲೂ ಬಡವರು, ದಲಿತರು, ರೈತರು, ಮಹಿಳೆಯರು ಮತ್ತು ಧ್ವನಿಯಿಲ್ಲದ ಸಮುದಾಯಗಳ ಪರವಾಗಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ 12 ಮಂದಿ ದಲಿತರು ಹಾಗೂ 32 ಸಚಿವರು ಇತರೆ ಹಿಂದುಳಿದ ವರ್ಗಗಳ ಸಚಿವರಾಗಿದ್ದಾರೆ. ಆದಿವಾಸಿ ಸಮುದಾಯಗಳಿಗೆ ಸೇರಿದ ಅನೇಕ ಸಚಿವರು ಮತ್ತು ರಾಜ್ಯಪಾಲರು ಇದ್ದಾರೆ. 60 ಏಕಲವ್ಯ ಶಾಲೆಗಳನ್ನು ತೆರೆಯುವ ಮೂಲಕ ಬುಡಕಟ್ಟು ವಿದ್ಯಾರ್ಥಿಗಳಲ್ಲಿ ಶಿಕ್ಷಣವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಮತ್ತು ರಾಷ್ಟ್ರೀಯ ಎಸ್ಟಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನವನ್ನು ನೀಡಲಾಗಿದೆ ಎಂದರು.

ಇದೇ ವೇಳೆ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 12,000 ನ್ಯಾಷನಲ್ ಫೆಲೋಶಿಪ್ ಮತ್ತು ರೂ 3,500 ಕೋಟಿ ವೆಚ್ಚದಲ್ಲಿ 12,400 ಬುಡಕಟ್ಟು ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳನ್ನು ಜೆಪಿ ನಡ್ಡಾ ಅವರು ಪಟ್ಟಿ ಮಾಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಉದ್ಘಾಟನೆ ಮತ್ತು 104 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸೇರಿದಂತೆ ಹಲವು ಕಾರ್ಯಕ್ರಮಗಳ ಕುರಿತು ಮೋದಿಯವರಿಗೆ ಶ್ಲಾಘನೆ ವ್ಯಕ್ತಪಡಿಸಿದರು.

ವಿಜಯ ಸಂಕಲಾಪ ಯಾತ್ರೆಯು ನಾಲ್ಕು ತಂಡಗಳಲ್ಲಿ 224 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, 75 ಸಾರ್ವಜನಿಕ ಸಭೆಗಳು ಮತ್ತು 150 ರೋಡ್‌ಶೋಗಳು ಈ ಯಾತ್ರೆಯ ಅಡಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ನಾಯಕರು ಇದೇ ವೇಳೆ ಮಾಹಿತಿ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT