ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ವಿಜಯ ಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಮಿಂಚು: ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ ಎಂದ ಬಿಎಸ್'ವೈ!

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರೂ, ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್ ಪ್ರಚಾರಕರಾಗಿ ಮಿಂಚಿದರು.

ಮೈಸೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರೂ, ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್ ಪ್ರಚಾರಕರಾಗಿ ಮಿಂಚಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಪ್ರಮುಖ ನಾಯಕರು ವೇದಿಕೆಯಲ್ಲಿದ್ದರೂ ಸಮಾರಂಭದಲ್ಲಿ ಸಾಕಷ್ಟು ಮಂದಿ ಯಡಿಯೂರಪ್ಪ ಪರ ಜೈಕಾರ ಕೂಗಿದರು. ಈ ಕೂಗು ಮುಗಿಲು ಮುಟ್ಟಿವಂತಿತ್ತು. ನಂತರ ಯಡಿಯೂರಪ್ಪ ಅವರೇ ನಡ್ಡಾ ಅವರ ಮಾತುಗಳನ್ನು ಆಲಿಸುವಂತೆ ನೆರೆದಿದ್ದ ಜನರ ಬಳಿ ಮನವಿ ಮಾಡಿಕೊಳ್ಳುವಂತಾಗಿತ್ತು.

ಆದರೂ ಜನರು ಯಡಿಯೂರಪ್ಪ ಪರ ಜೈಕಾರವನ್ನು ಮುಂದುವರೆಸಿದರು. ಈ ವೇಳೆ ಯಡಿಯೂರಪ್ಪ ಅವರು ಭಾಷಣ ಮಾಡುತ್ತಾರೆಂದು ಹೇಳಿ ಸಮಾಧಾನ ಪಡಿಸಲಾಯಿತು.

ಬಳಿಕ ಮೈಕ್ ಹಿಡಿದ ಯಡಿಯೂರಪ್ಪ ಅವರು, ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾವುದೇ ನಾಯಕರಿಲ್ಲದ ಕಾಂಗ್ರೆಸ್‌ ಏಪ್ರಿಲ್‌/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದೆ. ಆದರೆ, ನಮ್ಮ ಪಕ್ಷ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬಲಿಷ್ಠವಾಗಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!