ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವುದು ಖಚಿತ: ಬಿ.ಎಸ್.ಯಡಿಯೂರಪ್ಪ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ವಾತಾವರಣವಿದ್ದು, ರಾಜ್ಯದಲ್ಲಿ ಮುಂದೆ ಬಿಜೆಪಿಯಿಂದಲೇ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ವಾತಾವರಣವಿದ್ದು, ರಾಜ್ಯದಲ್ಲಿ ಮುಂದೆ ಬಿಜೆಪಿಯಿಂದಲೇ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಪಟ್ಟಣದಲ್ಲಿ ನಡೆದ ಬೃಹತ್‌ ರೋಡ್‌ ಶೋ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಬಹುತೇಕ ಪ್ರಚಾರಾಂದೋಲನಗಳಿಗೆ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲೆಡೆ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದಾರೆ. ಬಿಜೆಪಿಯ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿರುವುದು ರಾಜ್ಯದಲ್ಲಿ ಬಿಜೆಪಿ ಜನಪ್ರಿಯತೆ ಹೆಚ್ಚಿಸಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ದೇಶದ ಎಲ್ಲ ಭಾಗಗಳಲ್ಲಿ ದಯನೀಯವಾಗಿ ಸೋಲು ಕಂಡಿದೆ. ಪಕ್ಷದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು. ರಾಜ್ಯದಲ್ಲಿ ಕಮಲ ಅರಳಬೇಕು, ದೇಶವು ಕಾಂಗ್ರೆಸ್'ನಿಂದ ಮುಕ್ತವಾಗಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಬೈಲಹೊಂಗಲದಲ್ಲಿ ಪಕ್ಷದ ಯಾತ್ರೆಗೆ ದೊರೆತ ಭಾರೀ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಯಡಿಯೂರಪ್ಪ, ಪಕ್ಷದ ಕಾರ್ಯಕರ್ತರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲುವಂತೆ ನೋಡಿಕೊಳ್ಳಬೇಕು ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಭರವಸೆಗಳನ್ನು ಎಂದಿಗೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯು ಸುಳ್ಳುಗಳನ್ನು ಹಬ್ಬಿಸುತ್ತಿದೆಯೇ ಹೊರತು ಬೇರೇನನ್ನೂ ಅಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ