ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕೆಪಿಸಿಸಿ, ಶೀಘ್ರದಲ್ಲೇ ಕೇಂದ್ರ ನಾಯಕತ್ವಕ್ಕೆ ರವಾನೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ನಾಯಕರು 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ನಾಯಕರು 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರ ಮತ್ತು ಬುಧವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.

ಸಭೆಯಲ್ಲಿ 120 ಸ್ಥಾನಗಳಿಗೆ ಅಭ್ಯರ್ಥಿಗಳು ಬಹುತೇಕ ಅಂತಿಮಗೊಳಿಸಲಾಗಿದ್ದು, ಸುಮಾರು 75 ಸ್ಥಾನಗಳಲ್ಲಿ ಎರಡರಿಂದ ಮೂರು ಅಭ್ಯರ್ಥಿಗಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಲವು ಭಾಗಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇರುವುದರಿಂದ ಈ ಕುರಿತು ಇನ್ನು ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಂತಹ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮಾರ್ಚ್ 27 ರ ನಂತರ ಚುನಾವಣೆ ಘೋಷಣೆಯಾದ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಶೇ.75 ರಷ್ಟು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ನಂತರ ಕೇಂದ್ರ ನಾಯಕರಿಗೆ ಪಟ್ಟಿಯನ್ನು ಕಳುಹಿಸಲಾಗುವುದು ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ 65 ಸ್ಥಾನಗಳನ್ನು ದಾಟುವುದಿಲ್ಲ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಊಹಾಪೋಹವಷ್ಟೇ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌