ಪ್ರತಾಪ್ ಸಿಂಹ ಏನು ಸಚಿವರಾ? ಕೇವಲ ಸಂಸದ ಅಷ್ಟೇ: ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಏನು ಸಚಿವರಾ? ಅವರು ಕೇವಲ ಒಬ್ಬ ಸಂಸದ ಅಷ್ಟೇ. ಈ ಹೆದ್ದಾರಿ ಪೂರ್ತಿ ಪ್ರತಾಪ್ ಸಿಂಹ ಕ್ಷೇತ್ರದಲ್ಲಿ ಬರುತ್ತಾ? ಕಳಸವಾಡಿವರೆಗೆ ಮಾತ್ರ ಪ್ರತಾಪ್ ಸಿಂಹ ಕ್ಷೇತ್ರ ಬರುತ್ತೆ ಅಷ್ಟೇ. ಮಂಡ್ಯ, ರಾಮನಗರ ಜಿಲ್ಲೆಯಲ್ಲೂ ಈ ಹೆದ್ದಾರಿ ಹಾದುಹೋಗುತ್ತದೆ ಎಂದರು.
ಇದನ್ನು ಓದಿ: ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇ ಕ್ರೆಡಿಟ್ ಪಡೆಯಲು ಯತ್ನ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ನಾನು ಬೆಂಗಳೂರು-ಮೈಸೂರು ಹೆದ್ದಾರಿ ವೀಕ್ಷಿಸಲು ಹೋಗುತ್ತಿಲ್ಲ. ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಹೆದ್ದಾರಿ ವೀಕ್ಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಉದ್ಘಾಟಿಸುವ ಮೊದಲು ಇಂದು ಸಿದ್ದರಾಮಯ್ಯ ಹೆದ್ದಾರಿ ವೀಕ್ಷಣೆ ಮಾಡಲು ಮುಂದಾಗಿದ್ದರು. ಆದರೆ ಎಐಸಿಸಿಯ ಸ್ಕ್ರೀನಿಂಗ್ ಕಮಿಟಿ ಗುರುವಾರ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೆದ್ದಾರಿ ವೀಕ್ಷಣೆಯ ಪ್ರವಾಸ ರದ್ದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.