ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ದೊಡ್ಡವರು ದೊಡ್ಡ ಪಕ್ಷ ಸೇರಿದ್ದಾರೆ; ಅವರ ಬಗ್ಗೆ ಮಾತನಾಡುವಷ್ಟು ನಾನು ಇನ್ನು ಬೆಳೆದಿಲ್ಲ: ಸುಮಲತಾ ವಿರುದ್ಧ ಎಚ್ ಡಿಕೆ ಕಿಡಿ

ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು  ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹಾಸನ: ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು  ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಬಗ್ಗೆ ಹಾಸನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಮ್ಮ ಭದ್ರಕೋಟೆಯಲ್ಲಿ ಅವರು ಒಳ್ಳೆಯ ಕೆಲಸಗಳನ್ನು ಮಾಡಿದ್ರೆ, ಮಂಡ್ಯ ಜನತೆ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮಂಡ್ಯ ಅಭಿವೃದ್ಧಿಗೆ ಹಣ ತಂದಿದ್ದೇನೆ ಎಂದಿದ್ದಾರೆ. ಅವರು ಅನುದಾನ ತಂದಿದ್ದರೆ ಅದನ್ನು ಮಂಡ್ಯ ಜಿಲ್ಲೆಯ ಜನ ಹೇಳಬೇಕು. ಈ ಬಗ್ಗೆ ನಾನು ಏನನ್ನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುಮಲತಾ ಬಿಜೆಪಿ ಸೇರ್ಪಡೆ ವಿಷಯ ಯಾರಿಗೂ ಅಚ್ಚರಿ ಮೂಡಿಸುವ ಸುದ್ದಿ ಅಲ್ಲ. ಇದಕ್ಕೆ ಪ್ರಾಮುಖ್ಯತೆ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ