ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮೈತ್ರಿ ಸರ್ಕಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ನನಗೆ ಮುಕ್ತ ಅವಕಾಶ ನೀಡಲಿಲ್ಲ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೇತೃತ್ವದ ಸಂದರ್ಭದಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕರ ನಡುವೆ ಸಮನ್ವಯತೆ ಕಾಪಾಡಲು ಜಂಟಿ ಶಾಸಕಾಂಗ ಸಭೆ ನಡೆಸದಂತೆ ತಡೆದಿದ್ದರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.

ಬೇಲೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೇತೃತ್ವದ ಸಂದರ್ಭದಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕರ ನಡುವೆ ಸಮನ್ವಯತೆ ಕಾಪಾಡಲು ಜಂಟಿ ಶಾಸಕಾಂಗ ಸಭೆ ನಡೆಸದಂತೆ ತಡೆದಿದ್ದರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.

'ರೈತರು, ಬಡವರ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಲು ನಾಯಕರು ನನಗೆ ಮುಕ್ತ ಅವಕಾಶವನ್ನೂ ನೀಡಿಲ್ಲ. ಕಾಂಗ್ರೆಸ್‌ನ ಒಂದು ವರ್ಗದ ನಾಯಕರು ಜೆಡಿಎಸ್ ಮತ್ತು ಕಾಂಗ್ರೆಸ್ ಸಚಿವರ ನಡುವೆ ಯಾವುದೇ ಸಮನ್ವಯತೆಯನ್ನು ಬಯಸಲಿಲ್ಲ. ಎಲ್ಲ ಅಡೆತಡೆಗಳ ನಡುವೆಯೂ 25 ಕೋಟಿ ಕೃಷಿ ಸಾಲ ಮನ್ನಾ ಮಾಡಿದ್ದೇನೆ. ಆದರೆ, ನಾನು ಅವರೊಂದಿಗೆ ಚರ್ಚಿಸಿದ್ದರೆ ಅವರು ಅದಕ್ಕೂ ಅವಕಾಶ ನೀಡುತ್ತಿರಲಿಲ್ಲ' ಎಂದು ಆರೋಪಿಸಿದರು.

'ಡಿಕೆ ಶಿವಕುಮಾರ್ ಅವರು ಹಾಸನ ಜಿಲ್ಲೆಗೆ ನೀಡಿರುವ ಕೊಡುಗೆಗಳನ್ನು ವಿವರಿಸಬೇಕು. ಅವರಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ' ಎಂದರು.

ತಮ್ಮ ಬೆಂಬಲದಿಂದಲೇ ದೇವೇಗೌಡರು ಪ್ರಧಾನಿಯಾದರು ಎಂಬ ಕಾಂಗ್ರೆಸ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಎಡಪಕ್ಷಗಳು ದೇವೇಗೌಡರು ಪ್ರಧಾನಿಯಾಗಲು ನೆರವಾದವು ಎಂದರು. 

ಹಾಸನ ಟಿಕೆಟ್ ವಿಚಾರವಾಗಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದ ಅವರು, ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT