ಚಿದಾನಂದ ಸವದಿ 
ರಾಜಕೀಯ

ಬಿಜೆಪಿಯಲ್ಲಿ ಅಸಮಾಧಾನದ ಜ್ವಾಲಾಮುಖಿ ಸ್ಫೋಟ: ಜಾರಕಿಹೊಳಿ ಗೋಕಾಕ್ ಕ್ಷೇತ್ರವನ್ನ ಕುಮಟಳ್ಳಿಗೆ ಬಿಟ್ಟುಕೊಡ್ಲಿ- ಸವದಿ ಪುತ್ರ

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ.

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ. ಈ ಬಗ್ಗೆ ಯಾವುದೇ ಎರಡನೇ ಆಲೋಚನೆ ಇಲ್ಲ ಎಂದು ಬಿಜೆಪಿ ಮುಖಂಡ ಮತ್ತು ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ಹೇಳಿದ್ದಾರೆ.

ಅಥಣಿ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಶಾಸಕ ಮಹೇಶ ಕುಮಟಳ್ಳಿ ಎಂದು ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಇತ್ತೀಚೆಗೆ ಹೇಳಿಕೆ ನೀಡಿ ಮತದಾರರಲ್ಲಿ ಗೊಂದಲ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಿದಾನಂದ ಸವದಿ, ತಮ್ಮ ತಂದೆ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಹಳ ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ಜಾರಕಿಹೊಳಿ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಕುಮಟಳ್ಳಿ ಅವರನ್ನು ಅಥಣಿಯಲ್ಲಿ ಕಣಕ್ಕಿಳಿಸುವ ಬದಲು ಕುಮಟಳ್ಳಿಗೆ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಸಲು ಸಹಾಯ ಮಾಡಲಿ ಎಂದರು.

ನನ್ನ ತಂದೆ 2004 ರಿಂದ ಬಿಜೆಪಿಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪಕ್ಷದ ಬಗ್ಗೆ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದಾರೆ ಎಂದು ಚಿದಾನಂದ್ ಹೇಳಿದರು. 

ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕೆಂಬುದರ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ, ಅದು ಯಾರ ಪರವಾಗಿಯೂ ಇರಬಹುದು, ಹೈಕಮಾಂಡ್ ನಿರ್ಧಾರವನ್ನು ಗೌರವಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT