ಕೆ.ಎಸ್ ಈಶ್ವರಪ್ಪ 
ರಾಜಕೀಯ

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?; ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು: ಈಶ್ವರಪ್ಪ

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ. 

ಮಂಗಳೂರು: ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ. 

ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು. 

ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು