ಡಿ.ಕೆ ಸುರೇಶ್ 
ರಾಜಕೀಯ

ಉಪ‌ಚುನಾವಣೆಗಳನ್ನು ಮಾಡಿ ಮಾಡಿ ರೋಸಿ ಹೋಗಿದ್ದೇನೆ; ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ: ಡಿ.ಕೆ ಸುರೇಶ್

ರಾಮನಗರದಲ್ಲಿ  ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ.

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ತಮ್ಮ ಹಿಡಿತವನ್ನ ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಸಹೋದರ ಡಿ.ಕೆ.ಸುರೇಶ್‌ ಅವರನ್ನ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಮೂಲಕ ರಾಮನಗರ ವಿಧಾನಸಭಾ ಕ್ಷೇತ್ರವನ್ನ ವಶಕ್ಕೆ ಪಡೆಯಲು ಡಿ.ಕೆ ಶಿವಕುಮಾರ್‌ ಪ್ಲಾನ್ ನಡೆಸಿದ್ದಾರೆ, ಆದರೆ ನನಗೆ ರಾಜ್ಯ ರಾಜಕಾರಣದ ಬಗ್ಗೆ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,  ನನಗೂ ಬೇರೆ ಬೇರೆ ಕ್ಷೇತ್ರಗಳಿಂದ ಚುನಾವಣೆ ಸ್ಪರ್ಧೆಗೆ ಆಹ್ವಾನ ನೀಡುತ್ತಿದ್ದಾರೆ. ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು, ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನವಿದೆ. ಆದರೆ ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿಯನ್ನು ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಮನಗರದಲ್ಲಿ  ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ. ನಾನು ಏಕೈಕ ಸಂಸದನಾಗಿದ್ದೇನೆ. ಕಳೆದ 20 ವರ್ಷಗಳಲ್ಲಿ ಉಪಚುನಾವಣೆಗಳನ್ನು ಮಾಡಿ ರೋಸಿ ಹೋಗಿದ್ದೇನೆ. ಎಲ್ಲಾ ಉಪಚುನಾವಣೆಗಳನ್ನು ನಾವು ಮಾಡಿದ್ದೇವೆ. ಈಗ ಉಪಚುನಾವಣೆ ಬಗ್ಗೆ ನನಗೆ ಆಸಕ್ತಿಯಿಲ್ಲ ಎಂದರು.

ಈ ಬಗ್ಗೆ ನನಗೆ ಮಾಧ್ಯಮಗಳ ವರದಿ ಮೂಲಕ ಗೊತ್ತಾಗಿದೆ. ಚುನಾವಣಾ ಪ್ರಯುಕ್ತ ಬೇರೆ ಬೇರೆ ಕಾರ್ಯಗಳಲ್ಲಿ ಬ್ಯುಸಿ ಆಗಿದ್ದೇನೆ. ಇದುವರೆಗೆ ಯಾರೂ ರಾಜ್ಯ ನಾಯಕರು ಈ ಬಗ್ಗೆ ಚರ್ಚೆ ಮಾಡಿಲ್ಲ. ನನ್ನ ವ್ಯಾಪ್ತಿಯ ಎಲ್ಲ ಕ್ಷೇತ್ರಗಳಿಗೂ ನಾನೇ ಅಭ್ಯರ್ಥಿ ಅಂತ ಮತ ಕೇಳ್ತಾ ಇದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!