ಆರ್.ಅಶೋಕ್ ಮತ್ತು ಸೋಮಣ್ಣ 
ರಾಜಕೀಯ

ಬಿಜೆಪಿ ಒಳಜಗಳದ ಲಾಭ ಪಡೆಯಲು ಕಾಂಗ್ರೆಸ್ ಯತ್ನ: ಬೆಂಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ಗೆ ಒತ್ತಡ!

ಬಿಜೆಪಿ ನಾಯಕರ ಒಳಜಗಳ ಹಾಗೂ ಭಿನ್ನಾಭಿಪ್ರಾಯದ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕೆಂದು ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಬೆಂಗಳೂರು:  ಬಿಜೆಪಿ ನಾಯಕರ ಒಳಜಗಳ ಹಾಗೂ ಭಿನ್ನಾಭಿಪ್ರಾಯದ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕೆಂದು ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ವಸತಿ ಸಚಿವ ವಿ ಸೋಮಣ್ಣ ಮತ್ತು ಕಂದಾಯ ಸಚಿವ ಆರ್ ಅಶೋಕ್ ಇಬ್ಬರ ನಡುವಿನ ಸಂಬಂಧ ಹಳಸಿದೆ,  ಇಬ್ಬರ ನಡುವಿನ ಶೀತಲ ಸಮರ ಪಕ್ಷದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಹಿರಂಗವಾಯಿತು. ನಾಗರಭಾವಿಯಲ್ಲಿ  ನಡೆದ ಬೆಳವಣಿಗೆ ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಮುನ್ನೆಲೆಗೆ ತಂದಿದೆ.

ವೀರಶೈವ-ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷದ ನಾಯಕರು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಸಭೆ ನಡೆಸಿದರು . ರಾಜ್ಯ ರಾಜಧಾನಿಯ ಕ್ಷೇತ್ರಗಳಿಂದ ಸ್ಪರ್ಧಿಸಲು ಹೆಚ್ಚಿನ ಟಿಕೆಟ್ ಪಡೆಯಲು ನಿರ್ಧರಿಸಿದ್ದಾರೆ, ಇದು ಹೋರಾಟಕ್ಕೆ ಸರಿಯಾದ ಸಮಯ ಎಂದು ತೀರ್ಮಾನಿಸಿದ್ದಾರೆ.

ವೀರಶೈವ ಮಹಾಸಭಾ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಎಸ್.ಗುರುಸ್ವಾಮಿ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಸಮುದಾಯದವರಿಗೆ ಹೆಚ್ಚಿನ ಸ್ಥಾನ ನೀಡುವಂತೆ ಕೋರಿದ್ದಾರೆ.

40 ಸಾವಿರಕ್ಕೂ ಹೆಚ್ಚು ಸಮುದಾಯದ ಮತದಾರರಿರುವ ರಾಜಾಜಿನಗರ ಸೇರಿದಂತೆ ಲಿಂಗಾಯತ  ಸಮುದಾಯದ ಮತದಾರರು ಇರುವ ಕ್ಷೇತ್ರಗಳನ್ನೇ ಗುರಿಯಾಗಿಸಿಕೊಂಡಿದ್ದಾರೆ.  ವಿಶೇಷವಾಗಿ ಬೆಂಗಳೂರಿನ ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಅವರನ್ನು ಬೆಂಬಲಿಸಿದ್ದಾರೆ. ಏಕೆಂದರೆ ಅವರು ಕುರುಬ ಸಮುದಾಯಕ್ಕೆ ಸೇರಿದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ವರಿಷ್ಠರೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ.

ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರದಲ್ಲಿ ಸಾಕಷ್ಟು ಲಿಂಗಾಯತ ಮತಗಳಿದ್ದರೂ 2019 ರ ಲೋಕಸಭೆ ಚುನಾವಣೆಯಲ್ಲಿ ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಅವರು  ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT