ರಾಜಕೀಯ

ಎಲ್ಲವೂ ಸರಿಹೋಗುತ್ತದೆ, ಯಾರನ್ನೂ ಕಡೆಗಣಿಸುವುದಿಲ್ಲ; ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ: ಬಿ ಎಸ್ ಯಡಿಯೂರಪ್ಪ

Sumana Upadhyaya

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪಕ್ಷದೊಳಗೆ ನಾಯಕರು ಭಿನ್ನಮತ, ಅಸಮಾಧಾನ ಹೇಳಿಕೆ ನೀಡಿದರೆ, ಅಸಮಾಧಾನದಿಂದ ವರ್ತಿಸಿದರೆ ಅದು ಪಕ್ಷಕ್ಕೆ ಒಳ್ಳೆಯದಲ್ಲ, ಅದನ್ನು ಶಮನಗೊಳಿಸುವ ಪ್ರಯತ್ನವನ್ನು ಹಿರಿಯ ನಾಯಕರು ಮಾಡುತ್ತಿರುತ್ತಾರೆ.

ಸದ್ಯ ಬಿಜೆಪಿಯಲ್ಲಿ ವಸತಿ ಸಚಿವ ವಿ ಸೋಮಣ್ಣನವರಿಗೆ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ ವೈ ವಿಜಯೇಂದ್ರ ಮೇಲೆ ಅಸಮಾಧಾನವಿದೆ ಎಂಬುದು ಭಾರೀ ಚರ್ಚೆಯಾಗುತ್ತಿದೆ. ಸಚಿವ ಸೋಮಣ್ಣನವರು ನಿನ್ನೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದರು. 

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಅಭಿಪ್ರಾಯವನ್ನು ಕೇಳಿದಾಗ, ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ, ವಿಜಯೇಂದ್ರ ಕೂಡ ಕೆಲಸ ಮಾಡ್ತಿದ್ದಾರೆ, ಸೋಮಣ್ಣ ಕೂಡ ಕೆಲಸ ಮಾಡ್ತಿದ್ದಾರೆ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ನಮ್ಮದು ಒನ್ ಪಾಯಿಂಟ್ ಪ್ರೋಗ್ರೇಮ್ ಬೇರೆ ವಿಚಾರಕ್ಕೆ ನಾನು ತಲೆಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ದೆಹಲಿಗೆ ವರಿಷ್ಠರು ಸೋಮಣ್ಣನವರನ್ನು ಕರೆದು ಮಾತನಾಡಿದ್ದಾರೆ, ಎಲ್ಲವೂ ಸರಿಹೋಗುತ್ತದೆ,ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ಸೋಮಣ್ಣನವರನ್ನು ನಾನು ಭೇಟಿ ಮಾಡದೆ ಮೂರು ತಿಂಗಳಾಯಿತು. ಯಾರು ಯಾರನ್ನೂ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

SCROLL FOR NEXT