ಆರ್.ಅಶೋಕ್ 
ರಾಜಕೀಯ

ನಿಮ್ಮದೂ ಒಂದು ತುಕ್ಕುಹಿಡಿದ ಅಧ್ಯಾಯವಿದೆಯಲ್ಲಾ, ಸಾಮ್ರಾಟ್ ಅಶೋಕೂ: ಅರುಣರಾಗ, ವಿಜಯನಾದ ಕಥನಗಳ ಕಥೆ ಏನು?

ಜೆಡಿಎಸ್ ಗೆ 20 ಸ್ಥಾನಗಳು ಬರುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಆರ್. ಅಶೋಕ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು: ಜೆಡಿಎಸ್ ಗೆ 20 ಸ್ಥಾನಗಳು ಬರುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಆರ್. ಅಶೋಕ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಅವರು ಭವಿಷ್ಯವನ್ನು, ಸಂಖ್ಯಾಶಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು 'ಕಾಲಜ್ಞಾನಿ', 'ಸಂಖ್ಯಾಜ್ಞಾನಿ' ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ. ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ ಎಂದು ಕಾಲೆಳೆದಿದ್ದಾರೆ.

ಪಕ್ಷಕ್ಕೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರದಲ್ಲಿ ಗಿಣಿಭವಿಷ್ಯ ಹೇಳಿರುವ ಅವರು, ತಮ್ಮ ಬಿಜೆಪಿ ಅದೆಷ್ಟು ಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೆ! ಮರೆತಿದ್ದಾರೆಯೋ ಅಥವಾ ಬೇಕೆಂದೇ ಹೇಳಲಿಲ್ಲವೋ..? ಅವರೇ ಹೇಳಬೇಕು. ಎಷ್ಟೇ ಆಗಲಿ, ಅವರ ಜಾಣತನ ಜಗಜ್ಜಾಹೀರು ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಅಶೋಕ್ ಸಾಹೇಬರು 'ವಿಜಯ ಸಂಕಲ್ಪ'ಕ್ಕೆ ಬದಲಾಗಿ 'ಸುಳ್ಳುಸಂಕಲ್ಪ' ಮಾಡಿಕೊಂಡೇ ರಾಜ್ಯವನ್ನು ಸುತ್ತುತ್ತಿದ್ದಾರೆ. ಅವರ 'ಸುಳ್ಳುಸಂಕಲ್ಪ ಯಾತ್ರೆ'ಗೆ ನನ್ನ ಶುಭಾಶಯಗಳು ಹಾಗೂ ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪವಿದೆ.

ತಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ನೊಣ ಹುಡುಕುವುದು ಬಿಜೆಪಿಗೆ ಅಂಟಿದ ಜಾಡ್ಯ ಮತ್ತು ಆಜನ್ಮಪರ್ಯಂತ ಬಂದಿರುವ ಚಾಳಿ. ನಮ್ಮ ಪಕ್ಷ ಬಿಡೋರ ಮಾತು ಹಾಗಿರಲಿ, ನಿಮ್ಮ ಪಕ್ಷದಲ್ಲಿ ವಾರದೊಪ್ಪತ್ತಿನಿಂದ ನಿರಂತರವಾಗಿ ಕೇಳಿಬರುತ್ತಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಎನು ಅಶೋಕ್‌ ಅವರೇ?

ನಿನ್ನೆ ದಿನ ನಿಮ್ಮ ಕೇಂದ್ರ ಗೃಹ ಸಚಿವರು ಅಮಿತ್ ಶಾ ಅವರು ಮಾಡಿದ ಪಂಚಾಯಿತಿ ಕಟ್ಟೆ ಪುರಾಣದ ಅಸಲಿಯೆತ್ತೇನು? ಈ ಬಿಜೆಪಿಯ ಗೃಹಭಂಗದಿಂದ ಯಾರಿಗೆ ದುಃಖ? ಯಾರಿಗೆ ʼಸಂತೋಷʼ!? ಕೊಂಚ ಹೇಳಬಲ್ಲಿರಾ ಅಶೋಕ್‌ ಅವರೇ?

ಇಷ್ಟೆಲ್ಲಾ ಅವಾಂತರ, ಹಗರಣಗಳ ಹೊಲಸು ಮೆತ್ತಿಕೊಂಡಿರುವ ನೀವು, ನಮ್ಮನ್ನು 20 ಸೀಟಿಗೇ ಕಟ್ಟಿ ಹಾಕಬಲ್ಲಿರಾ? ʼ40% ನಾಯಕʼರಾದ ನಿಮ್ಮಲ್ಲಿ ಆ ಧಮ್ಮುತಾಕತ್ತು ಇದೆಯಾ? ಹಾಗಿದ್ದರೆ, ವಿಶ್ವವಂದ್ಯ ಪ್ರಧಾನಿಗಳು ಅಷ್ಟು ಬಿಡುವಾಗಿ ಕರ್ನಾಟಕಕ್ಕೆ ಪದೇಪದೆ ಓಡೋಡಿ ಬರುತ್ತಾರೇಕೆ? ಅಮಿತ್ ಶಾರವರ ಅಪರಿಮಿತ ಭೇಟಿಗಳು ಯಾಕೋ?? ಪಾಪ.. ನಿಮ್ಮ ಫಜೀತಿ!!

ಚುನಾವಣೆ ಆಗಲಿ, ಫಲಿತಾಂಶ ಬರಲಿ. ಓಡು ಮಗಾ,ಓಡು ಮಗಾ ಸರದಿ ಯಾರದ್ದೆನ್ನುವುದು ಜನಕ್ಕೇ ಗೊತ್ತಾಗುತ್ತದೆ. ಎಷ್ಟಾದರೂ ಓಡು ಮಗಾ ರೇಸ್ʼನಲ್ಲಿ ನಿಮ್ಮನ್ನು ಸರಿಗಟ್ಟುವ ವೀರರೂ ಶೂರರೂ ಕರ್ನಾಟಕದಲ್ಲಿ ಇದ್ದಾರೆಯೇ? ʼಆಪರೇಷನ್ ಕಮಲಕಾಂಡʼದಲ್ಲಿ ನಿಮ್ಮದೂ ಒಂದು ತುಕ್ಕುಹಿಡಿದ ಅಧ್ಯಾಯವಿದೆಯಲ್ಲಾ? ಸಾಮ್ರಾಟ್ ಅಶೋಕೂ ಮತ್ತು ಆಪರೇಷನ್ ಕಮಲವೂ.. ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video