ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಮೊದಲ ಪಟ್ಟಿ ಸಿದ್ದವಾದ್ರೂ ತಪ್ಪಿಲ್ಲ ಕಾಂಗ್ರೆಸ್ ಗೆ ಸಂಕಷ್ಟ: 40-45 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮುಂದುವರಿದ ಹಗ್ಗಜಗ್ಗಾಟ!

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 125 ರಿಂದ 130  ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ, ಆದರೆ ಎಲ್ಲಾ 224 ಕ್ಷೇತ್ರಗಳಿಗೂ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡುವ ಸಂಬಂಧ ಕೈ ಪಕ್ಷಕ್ಕೆ ಸಂಕಷ್ಟ ಎದುರಾಗಿದೆ.

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 125 ರಿಂದ 130  ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ, ಆದರೆ ಎಲ್ಲಾ 224 ಕ್ಷೇತ್ರಗಳಿಗೂ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡುವ ಸಂಬಂಧ ಕೈ ಪಕ್ಷಕ್ಕೆ ಸಂಕಷ್ಟ ಎದುರಾಗಿದೆ.

ಮೊದಲ 125-130 ಟಿಕೆಟ್‌ಗಳಿಗೆ ಯಾವುದೇ ತೊಂದರೆ ಇಲ್ಲ, ಏಕೆಂದರೆ  ಇವರೆಲ್ಲಾ ನಮ್ಮಲ್ಲಿ ಹಾಲಿ  ಶಾಸಕರು ಮತ್ತು ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಾಗಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.  ಬ್ಲಾಕ್ ಮತ್ತು ಸ್ಥಳೀಯ ಜಿಲ್ಲಾ ಘಟಕಗಳಿಂದ ಅನೇಕ ಸಮೀಕ್ಷೆಗಳು ಮತ್ತು ವರದಿಗಳು ಈ ಕ್ಷೇತ್ರಗಳಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿದೆ.

ಇತ್ತೀಚಿನ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಸದಸ್ಯತ್ವ ಸಂಖ್ಯೆ ಏರಿಸಲು ಅಭ್ಯರ್ಥಿಗಳ ಸಾಮರ್ಥ್ಯವನ್ನು ಪಕ್ಷವು ಪರಿಗಣನೆಗೆ ತೆಗೆದುಕೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಉಳಿದಿರುವ ಸುಮಾರು 45 ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆಗಳು ವರದಿ ನೀಡಿವೆ. ಬ್ಲಾಕ್ ಮತ್ತು ಜಿಲ್ಲಾ ಘಟಕಗಳಿಂದ ಸಂಗ್ರಹಿಸಿದ ಅಭಿಪ್ರಾಯಗಳಲ್ಲಿ ಈ ಕ್ಷೇತ್ರಗಳು ಸವಾಲಿನ ವಿಷಯವಿಲ್ಲ ಎಂದು ತಿಳಿದು ಬಂದಿದೆ.

ಇನ್ನು ಉಳಿದ 45-49  ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್‌ಗೆ ಸವಾಲು ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.

ಏಕೆಂದರೆ ಈ ಕ್ಷೇತ್ರಗಳಿಗೆ ಸ್ಪಷ್ಟ ಅಭ್ಯರ್ಥಿಗಳಿಲ್ಲ,  ಹಿಂದಿನ  ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲಿ ಸತತವಾಗಿ ಸೋಲುತ್ತಿದ್ದಾರೆ.  ಹೀಗಾಗಿ ಅವರಿಗೆ ನೆರವು ನೀಡಲು ಪಕ್ಷವು ಕ್ಷೇತ್ರವಾರು ಸಮೀಕ್ಷೆಗಳನ್ನು ನಡೆಸಿದ್ದು, ವೈಯಕ್ತಿಕವಾಗಿ ಕ್ಷೇತ್ರದಲ್ಲಿ ಯಾರು ಪ್ರಬಲರು ಮತ್ತು ಸ್ವೀಕಾರಾರ್ಹರು ಎಂಬುದಕ ಬಗ್ಗೆ ಚಿಂತಿಸುತ್ತಿದೆ ಎಂದು ಹೇಳಲಾಗಿದೆ.

ಅಭ್ಯರ್ಥಿಯ ಗೆಲುವಿನ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದಾರೆ, ಅಂದರೆ ಆಡಳಿತಾರೂಢ ಬಿಜೆಪಿಯ ಶಕ್ತಿಯ ವಿರುದ್ಧ  ಪ್ರಬಲ ಅಭ್ಯರ್ಥಿಗೆ ಅವಕಾಶ ನೀಡಬೇಕಾಗಿದೆ, ಹೀಗಾಗಿ ಅಭ್ಯರ್ಥಿಗೆ ಇರುವ ಸುಮದಾಯದ ಬೆಂಬಲ ಮತ್ತು ಆರ್ಥಿಕ ಬೆಂಬಲವನ್ನು ಹಾಗೂ ಸಾಮರ್ಥ್ಯವನ್ನು ಪರಿಗಣನೆಗೆತೆಗದುಕೊಳ್ಳಲಾಗುತ್ತಿದೆ.

ಇದರೊಂದಿಗೆ ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ ಅಲ್ಪಸಂಖ್ಯಾತ ಸಮುದಾಯದಂತಹ ಮುಸ್ಲಿಮರು ತಮ್ಮ ಸಮುದಾಯಗಳಿಗೆ ಪ್ರಾತಿನಿಧ್ಯದ ಬಗ್ಗೆ ಈಗಾಗಲೇ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ , ಹೀಗಾಗಿ ಅದನ್ನು ಪರಿಗಣಿಸಲಾಗುವುದು.

ಮೂಲಗಳು ಹೇಳುವಂತೆ ಕೆಲವು ಪ್ರಮುಖ ನಾಯಕರು ತಮ್ಮ ಬೆಂಬಲಿಗರನ್ನು ಅಭ್ಯರ್ಥಿಗಳನ್ನಾಗಿಸಲು ಪ್ರಯತ್ನಿಸುತ್ದಿದ್ದರು,  ಆದರೆ ಈ ಬಾರಿ ಸಮೀಕ್ಷೆಗಳು ಹಿನ್ನೆಲೆಯಲ್ಲಿ ಈ ಬಾರಿ ಆಯ್ಕೆ ಹೆಚ್ಚು ವಸ್ತುನಿಷ್ಠವಾಗಿದೆ ಎಂದು  ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT