ಸಿದ್ದರಾಮಯ್ಯ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಿದ್ದರಾಮಯ್ಯ

ಮೇ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ದಿನವಾದ ಮಾರ್ಚ್ 22 ರಂದು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ನವದೆಹಲಿ: ಮೇ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ದಿನವಾದ ಮಾರ್ಚ್ 22 ರಂದು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ, ಚುನಾವಣಾ ಕಾರ್ಯತಂತ್ರ ಮತ್ತು ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

'ನಿನ್ನೆ ನಡೆದ ಸಭೆಯಲ್ಲಿ ಚುನಾವಣಾ ರಣತಂತ್ರ ಸಿದ್ಧಪಡಿಸುತ್ತಿದ್ದೆವು. ರಾಜ್ಯ ಮಟ್ಟದ ಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಅವರು ಮಾರ್ಚ್ 20 ರಂದು ಬೆಳಗಾವಿಗೆ ಬರುತ್ತಿದ್ದಾರೆ. ಅದರ ಸಿದ್ಧತೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ' ಎಂದು ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯುಗಾದಿ ಹಬ್ಬದ ದಿನದಂದು ಮಾರ್ಚ್ 22 ರಂದು ಬೆಳಿಗ್ಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ನವದೆಹಲಿಯಲ್ಲಿ ಶುಕ್ರವಾರ ನಡೆಯಿತು. ವರದಿಗಳ ಪ್ರಕಾರ, ಅವರು 61 ಹಾಲಿ ಕಾಂಗ್ರೆಸ್ ಶಾಸಕರನ್ನು ಒಳಗೊಂಡಂತೆ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅನುಮೋದಿಸಿದ್ದಾರೆ ಎನ್ನಲಾಗಿದೆ.

ಪಕ್ಷದ ಸ್ಕ್ರೀನಿಂಗ್ ಸಮಿತಿಯು ಈ ತಿಂಗಳ ಆರಂಭದಲ್ಲಿ ಟಿಕೆಟ್ ಆಕಾಂಕ್ಷಿಗಳ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿದ್ದು, ಅಂತಿಮ ಪರಿಶೀಲನೆಗಾಗಿ ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ.

ಶುಕ್ರವಾರ ರಾತ್ರಿ ನಡೆದ ಸಭೆಯ ನಂತರ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ರಾಜ್ಯ ಸ್ಕ್ರೀನಿಂಗ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳ ಬಗ್ಗೆ ಸಿಇಸಿ ಚರ್ಚಿಸಿದೆ ಮತ್ತು ಹೆಚ್ಚಿನ ಹೆಸರುಗಳನ್ನು ಅನುಮೋದಿಸಿದೆ ಮತ್ತು ಎಐಸಿಸಿ ಅದನ್ನು ಪ್ರಕಟಿಸಲಿದೆ' ಎಂದು ಹೇಳಿದರು.

ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಬಹುದು ಎಂದು ಸೂಚಿಸಿದ ಅವರು, ‘ಎಲ್ಲರೂ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮೈತ್ರಿ ಸಾಧ್ಯತೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಯಾರೊಂದಿಗೂ ಮೈತ್ರಿ ಇಲ್ಲ. ಒಂದು ಕ್ಷೇತ್ರದಲ್ಲಿ ಮೈತ್ರಿಗಾಗಿ ಕೋರಲಾಗಿದೆ. ಈ ಬಗ್ಗೆ ನಾವು ಚರ್ಚಿಸುತ್ತೇವೆ ಮತ್ತು ನಿರ್ಧರಿಸುತ್ತೇವೆ. 224 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಪಡೆದು ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು ಎನ್ನುವ ಗುರಿಯನ್ನು ಕಾಂಗ್ರೆಸ್ ಹಾಕಿಕೊಂಡಿದೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ತಮ್ಮ ಪಟ್ಟಿಯನ್ನು ಪ್ರಕಟಿಸಿಲ್ಲ.

ತಾವು ಸ್ಪರ್ಧಿಸಲಿರುವ ಕ್ಷೇತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದರು. ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ, ಯಾರು ಹೇಳಿದರು?. ಈ ಬಗ್ಗೆ ಸಿದ್ದರಾಮಯ್ಯ ಅಥವಾ ನಾನು ಇದನ್ನು ಖಚಿತಪಡಿಸಬೇಕು ಎಂದರು.

ಅದನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ. ತಾವಿನ್ನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತೇನೆ ಎಂದು ಕೋಲಾರದಲ್ಲಿ ಹೇಳಿದ್ದೆ ಎಂದರು.

ಸದ್ಯ ಬಾದಾಮಿ ಶಾಸಕರಾಗಿರುವ ಸಿದ್ದರಾಮಯ್ಯ ಅವರು, ಪಕ್ಷದ ಹೈಕಮಾಂಡ್‌ನ ಒಪ್ಪಿಗೆ ಮೇರೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT