ಮುರುಗೇಶ್ ನಿರಾಣಿ 
ರಾಜಕೀಯ

ಬಿಎಸ್‌ವೈ-ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಮುರುಗೇಶ್ ನಿರಾಣಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ ಸೋಮಣ್ಣ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳನ್ನು ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ನಿರಾಕರಸಿದರು.

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ ಸೋಮಣ್ಣ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳನ್ನು ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ನಿರಾಕರಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಸೋಮಣ್ಣ ಇಬ್ಬರೂ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದು, ಇಬ್ಬರಿಗೂ ಸಮಾನ ಗೌರವವಿದೆ, ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ 108 ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಉದ್ಘಾಟನೆ ಸಂದರ್ಭದಲ್ಲಿ ಇಬ್ಬರೂ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದರು.

ಸೋಮಣ್ಣ ಅವರ ಜೊತೆಗಿನ ದೆಹಲಿ ಭೇಟಿಯಲ್ಲಿ ವಿಶೇಷವೇನೂ ಇಲ್ಲ. ಸಣ್ಣಪುಟ್ಟ ಸಮಸ್ಯೆಗಳನ್ನು ವೇದಿಕೆಯಲ್ಲಿಯೇ ಪರಿಹರಿಸಲು ಪಕ್ಷ ಸಮರ್ಥವಾಗಿದೆ ತಿಳಿಸಿದರು.

ಪಕ್ಷ ನನ್ನನ್ನು ನಿರ್ಲಕ್ಷಿಸಿಲ್ಲ. ನನಗೆ ಬೆಳಗಾವಿಯ ವಿಜಯ ಸಂಕಲನ ಯಾತ್ರೆಯ ಉಸ್ತುವಾರಿಯನ್ನು ವಹಿಸಲಾಗಿದೆ.  ಪಕ್ಷವು 224 ಕ್ಷೇತ್ರಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತಿದ್ದು, ಮುಖ್ಯಮಂತ್ರಿಯಾಗುವ ಸಾಮರ್ಥ್ಯವಿರುವ ಹಲವು ನಾಯಕರು ಪಕ್ಷದಲ್ಲಿದ್ದಾರೆ ಎಂದರು.

ಇದೇ ವೇಳೆ ಕಬ್ಬು ರೈತರು ತಂದ ಉತ್ಪನ್ನವನ್ನು ತೂಕ ಮಾಡುವಲ್ಲಿ ವಂಚನೆ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿಹಾಕಿದ ನಿರಾಣಿ, ಆಯಾ ಸಕ್ಕರೆ ಕಾರ್ಖಾನೆಗಳಲ್ಲಿ ರೈತರ ಸಮ್ಮುಖದಲ್ಲಿ ಕಬ್ಬನ್ನು ತೂಕ ಮಾಡಲಾಗುತ್ತಿದೆ. ಅಲ್ಲಿಗೆ ಯಾರು ಬೇಕಾದರೂ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಹೇಳಿದರು.

ಏತನ್ಮಧ್ಯೆ, ಮಹದೇಶ್ವರ ದೇವರ ಪ್ರತಿಮೆ ಉದ್ಘಾಟನೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬೊಮ್ಮಾಯಿಯವರು ಯಡಿಯೂರಪ್ಪ ಅವರೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ನಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಸಾರ ಹೊರಟಿದ್ದಾರೆನ್ನಲಾಗಿದೆ.

ಮತ್ತೊಂದೆ ಸೋಮಣ್ಣ ಅವರಿಗೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಚುನಾವಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT