ಮುಸ್ಲಿಂ ಮುಖಂಡರೊಂದಿಗೆ ಲಕ್ಷ್ಮಣ್ ಸವದಿ ಇರುವ ಚಿತ್ರ 
ರಾಜಕೀಯ

ರಾಜ್ಯ  ಬಿಜೆಪಿ ನಾಯಕರಿಗೆ ಏಕಾಏಕಿ "ತುಷ್ಟಿಕರಣ" ರಾಜಕೀಯ ನೆನಪಾಗಿದೆ! ಕಾಂಗ್ರೆಸ್ ಟೀಕೆ

ರಾಜ್ಯ  ಬಿಜೆಪಿ ನಾಯಕರಿಗೆ ಏಕಾಏಕಿ ''ತುಷ್ಟಿಕರಣ" ರಾಜಕೀಯ ನೆನಪಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಮುಸ್ಲಿಂ ಸಮುದಾಯ ಕುರಿತ ಇತ್ತೀಚಿಗ ಕೆಲ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ರೀತಿ ಹೇಳಿದೆ. 

ಬೆಂಗಳೂರು: ರಾಜ್ಯ  ಬಿಜೆಪಿ ನಾಯಕರಿಗೆ ಏಕಾಏಕಿ ''ತುಷ್ಟಿಕರಣ" ರಾಜಕೀಯ ನೆನಪಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಮುಸ್ಲಿಂ ಸಮುದಾಯ ಕುರಿತ ಇತ್ತೀಚಿಗ ಕೆಲ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ರೀತಿ
ಹೇಳಿದೆ.

ಶಿವಮೊಗ್ಗದಲ್ಲಿ ಇತ್ತೀಚಿಗೆ ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿದ್ದ ಕೆಎಸ್ ಈಶ್ವರಪ್ಪ ಹಿಂದೂಗಳಲ್ಲಿಯೂ ಮುಸ್ಲಿಮರಂತೆ ತಲೆ ಹರಟೆಗಳಿದ್ದಾರೆ ಎಂದು ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದರು. ಇಂತಹ ಕೆಲ ನಾಯಕರ ಹೇಳಿಕೆಗಳನ್ನು ಟ್ವಿಟರ್ ನಲ್ಲಿ ಉಲ್ಲೇಖಿಸುವ ಮೂಲಕ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಬೆಂಕಿ ಹಚ್ಚುವಾಗ ಇಲ್ಲದ ಪ್ರೀತಿ ಈಗ ಬಂದಿದೆ! ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ! ಬಣ್ಣ ಬದಲಿಸುವ ಬಿಜೆಪಿಗರನ್ನು ಕಂಡು ಊಸರವಳ್ಳಿಯೂ ನಾಚುತ್ತದೆ! ಇದು ನಿಮ್ಮ ಓಲೈಕೆ ರಾಜಕಾರಣದ ವ್ಯಾಖ್ಯಾನದೊಳಗೆ ಬರುವುದಿಲ್ಲವೇ? ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!