ಆಮ್ ಆದ್ಮಿ ಪಾರ್ಟಿ 
ರಾಜಕೀಯ

ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

ಬೆಂಗಳೂರು: ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್‌ನಲ್ಲಿ ಅಧಿಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (Aam Aadmi Party), ಇದೀಗ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಬ್ರಿಜೇಶ್ ಕಾಳಪ್ಪ ಸೇರಿದಂತೆ ಹಲವರ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಿದೆ. 

ಮೊದಲ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಇಂದು ನಾವು ಬಿಡುಗಡೆ ಮಾಡುತ್ತಿರುವ ಮೊದಲ ಲಿಸ್ಟ್ ಜೊತೆಗೆ ಬೆಸ್ಟ್ ಲಿಸ್ಟ್. ಭ್ರಷ್ಟಾಚಾರ ರಹಿತ ಜನ ಸಾಮಾನ್ಯರಿಗೆ ನಮ್ಮ ಪಕ್ಷ  ಟಿಕೆಟ್ ನೀಡುತ್ತಿದೆ. 10 ವರ್ಷದಲ್ಲಿ ನಮ್ಮ ಪಕ್ಷ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಕಡಿಮೆ ಸಮಯದಲ್ಲಿ ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!