ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ 
ರಾಜಕೀಯ

ಬಿಜೆಪಿಗೆ ಶಾಕ್: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ, ಪಕ್ಷಕ್ಕೂ ಗುಡ್ ಬೈ

ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಗೆ ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು: ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಗೆ ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. 

ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ನೀಡಿದ್ದು, ಅವರೂ ಕೂಡ ರಾಜಿನಾಮೆ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. 

ಟಿಕೆಟ್ ನಿರಾಕರಣೆಯೇ ರಾಜಿನಾಮೆಗೆ ಕಾರಣ
ಬಿಜೆಪಿ ಮೂಲಗಳ ಪ್ರಕಾರ ಚಿಂಚನಸೂರ್ ರಾಜಿನಾಮೆಗೆ ಟಿಕೆಟ್ ನಿರಾಕರಣೆಯೇ ಕಾರಣ ಎನ್ನಲಾಗಿದೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಅಂತೆಯೇ ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು‌ ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.

ನಾಳೆ ಬೆಳಿಗ್ಗೆ ಕಾಂಗ್ರೆಸ್ ಸೇರ್ಪಡೆ
ಬಾಬೂರಾವ್ ಚಿಂಚನಸೂರ್ ಮಂಗಳವಾರ ಬೆಳಿಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸಮ್ಮುಖದಲ್ಲಿ ಅವರು ‘ಕೈ’ ಹಿಡಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಕಾಬೂಲ್ ನಲ್ಲಿ ವೈಮಾನಿಕ ದಾಳಿ: ಪಾಕ್ ಸೇನೆಯಿಂದ ಹತ್ಯೆ, ರಶೀದ್ ಖಾನ್ ಸೇರಿದಂತೆ ಅಪ್ಘನ್ ಕ್ರಿಕೆಟಿಗರ ಆಕ್ರೋಶ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

SCROLL FOR NEXT