ವೈಎಸ್ ವಿ ದತ್ತ 
ರಾಜಕೀಯ

ಡಿಕೆಶಿ ಕಟ್ಟಿ ಹಾಕಲು ಸಿದ್ದರಾಮಯ್ಯರಿಂದ ದತ್ತ ಆಡಿಯೋ ರಿಲೀಸ್! ಬಿಜೆಪಿ ಬಾಂಬ್ 

ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಡುವಣ ಆರೋಪ,ಪ್ರತ್ಯಾರೋಪ, ಟೀಕೆಗಳು ತಾರಕಕ್ಕೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಡುವಣ ಆರೋಪ,ಪ್ರತ್ಯಾರೋಪ, ಟೀಕೆಗಳು ತಾರಕಕ್ಕೇರಿದೆ.

ಈ ಮಧ್ಯೆ ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವೈಎಸ್ ದತ್ತ ಅವರದು ಎನ್ನಲಾದ ಆಡಿಯೋವೊಂದು ರಿಲೀಸ್ ಆಗಿದೆ.ಇದರಲ್ಲಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿರುವ ವೈಎಸ್ ವಿ ದತ್ತ, ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. 

ಈ ಆಡಿಯೋ ಕುರಿತು ವಾಹಿನಿಯೊಂದರ ವರದಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ವಿಪಕ್ಷ ನಾಯಕ ಸಿದ್ದರಾಮಯ್ಯ ದತ್ತ ಅವರ ಆಡಿಯೋ ರಿಲೀಸ್ ಮಾಡಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ಹೇಳಿದೆ.

ಸಿದ್ದರಾಮಯ್ಯ ಅವರನ್ನು ಕ್ಷೇತ್ರವಿಲ್ಲದೆ ಅನಾಥರಾಗಿಸುವಲ್ಲಿ ಡಿಕೆ ಶಿವಕುಮಾರ್ ಸಫಲರಾಗಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಈ ಆಡಿಯೋ ರಿಲೀಸ್ ಮಾಡಿಸಿದ್ದಾರೆ. ಅದೇನೆ ಇರಲಿ, ಕಾಂಗ್ರೆಸ್ ಮನೆಯೊಂದು ಮೂವತ್ತು ಬಾಗಿಲು! ಎಂದು ಬಿಜೆಪಿ ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ