ರಾಜಕೀಯ

ಕೋಲಾರ ಸಮೀಕ್ಷೆ ವಿರುದ್ಧ ಬೆಂಬಲಿಗರ ಆಕ್ರೋಶ; ವರುಣಾದಿಂದ ಸ್ಪರ್ಧಿಸಲು ಇಲ್ಲ ಅನುಮತಿ; ಕ್ಷೇತ್ರ ಯಾವುದಯ್ಯಾ ಸಿದ್ದರಾಮಯ್ಯಗೆ?

Shilpa D

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಕೋಲಾರದಲ್ಲಿ ಸೋಲು ಖಚಿತ ಎಂದು ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಮತ್ತು ಅವರ ತಂಡ ನಡೆಸಿದ ಸಮೀಕ್ಷೆಯ ಬಗ್ಗ ಕೋಲಾರದ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಸಿದ್ದರಾಮಯ್ಯ ಅವರ ಗೆಲುವಿಗೆ ಶ್ರಮಿಸುತ್ತಿದ್ದು, ಇಲ್ಲಿಂದ ಅವರು ಸುಲಭವಾಗಿ ಗೆಲ್ಲಬೇಕು, ಮತದಾರರು ಸಿದ್ದರಾಮಯ್ಯ ಪರವಾಗಿದ್ದಾರೆ ಎಂದು ಮಾಹಿತಿ ಸೂಚಿಸುತ್ತದೆ, ಎಂದು ಕೋಲಾರದಲ್ಲಿ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರದ ಉಸ್ತುವಾರಿ ಸದಸ್ಯರಲ್ಲಿ ಒಬ್ಬರಾದ ಎಂಎಲ್‌ಸಿ ಅನಿಲ್ ಕುಮಾರ್ ಹೇಳಿದ್ದಾರೆ.

ತಮ್ಮ ಸ್ಥಾನವನ್ನು ತ್ಯಾಗ ಮಾಡಲು ಮುಂದಾಗಿರುವ ಕೋಲಾರ ಹಾಲಿ ಶಾಸಕ ಕೆ.ಶ್ರೀನಿವಾಸಗೌಡ, ಸಿದ್ದರಾಮಯ್ಯ ಕೋಲಾರ ಬಿಟ್ಟು ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.  ವರುಣಾವನ್ನು ಆಯ್ಕೆ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಕೋಲಾರದಿಂದ ಗೆದ್ದು ಮುಖ್ಯಮಂತ್ರಿಯಾಗಬೇಕು ಎಂದು ನಾನು ಬಯಸುತ್ತೇನೆ, ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುತ್ತಾರೆ ಎಂಬ ವಿಶ್ವಾಸದಲ್ಲಿರುವ ಹಿರಿಯ ನಾಯಕರ ಮನವೊಲಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಹೇಳಿದರು.

ಯುವ ಕಾಂಗ್ರೆಸ್ ತಂಡದ ನೇತೃತ್ವ ವಹಿಸಿರುವ ಕೆಪಿಸಿಸಿ ಸದಸ್ಯ ಪ್ರವೀಣ್ ಗೌಡ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ ಅವರ ಗೆಲುವಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ''ಹೈಕಮಾಂಡ್‌ಗೆ ಅನುಮಾನವಿದ್ದರೆ ಮತ್ತೊಮ್ಮೆ ಸಮೀಕ್ಷೆ ನಡೆಸಬೇಕು. ಸಿದ್ದರಾಮಯ್ಯ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಯುವ ಕಾಂಗ್ರೆಸ್ ಮುಖಂಡರು ಹೈಕಮಾಂಡ್‌ಗೆ ಮೇಲ್ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕನುಗೋಳು ಸಮೀಕ್ಷಾ ವಿಧಾನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ''ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಮತದಾರರು ಕಳೆದ ಎರಡು ತಿಂಗಳಿಂದ ಪಕ್ಷ ಬಲಗೊಳ್ಳುತ್ತಿಸುತ್ತಿದ್ದಾರೆ. ಹೈಕಮಾಂಡ್ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದರೆ ಪಕ್ಷಕ್ಕೆ ಸಂಕಷ್ಟ ತಂದೊಡ್ಡಲಿದೆ,'' ಎಂದರು.

ಭಾನುವಾರದಂದು ಕಾಂಗ್ರೆಸ್ ಮುಖಂಡರು ಸಭೆ ನಡೆಸಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೋಲಾರದಿಂದ ಸ್ಪರ್ಧಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಬೇರೆ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುತ್ತಾರೆ, ತಮ್ಮ ಬೆಂಬಲಕ್ಕೆ ಯಾರು ಇರುವುದಿಲ್ಲ ಎಂಬುದನ್ನು ಮನಗಂಡ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ಹಿಂಜರಿದಿದ್ದಾರೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

SCROLL FOR NEXT