ಮೋದಿ-ಅಮಿತ್ ಶಾ 
ರಾಜಕೀಯ

ಮತ್ತೆ ಅಧಿಕಾರಕ್ಕೇರುವ ಹಠ ತೊಟ್ಟ ಬಿಜೆಪಿ; ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸತತ ಭೇಟಿ

ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹಠ ತೊಟ್ಟಂತಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹಠ ತೊಟ್ಟಂತಿದೆ.

ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯಕ್ಕೆ ಸತತ ಭೇಟಿ ನೀಡುವ ಮೂಲಕ ಚುನಾವಣಾ ಕಾವು ಏರಿಸುತ್ತಿದ್ದು, ಬಿಜೆಪಿ ತನ್ನ ಪ್ರಚಾರಕ್ಕೆ ಹೊಸ ಹುರುಪು ತುಂಬಲು ಈ ಇಬ್ಬರು ಹಿರಿಯ ನಾಯಕರನ್ನೇ ನೆಚ್ಚಿಕೊಂಡಿದೆ.

ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಅವರ ನಿವಾಸದಲ್ಲಿ ಉಪಹಾರ ಸಭೆ ನಡೆಸಲಿದ್ದಾರೆ.

ನಂತರ ಅಮಿತ್ ಶಾ ಅವರು, ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆಯ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಸಹಕಾರ ಖಾತೆಯನ್ನು ಹೊಂದಿರುವ ಅಮಿತ್ ಶಾ, ನಂತರ ಬೆಂಗಳೂರಿನ ಹೊರವಲಯದಲ್ಲಿರುವ ಕೊಮ್ಮಘಟ್ಟ ಗ್ರಾಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ 'ಸಹಕಾರ ಸಮೃದ್ಧಿ ಸೌಧ'ಕ್ಕೆ ಶಂಕುಸ್ಥಾಪನೆ ಮತ್ತು ಸಹಕಾರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ, ಅಮಿತ್ ಶಾ ಅವರು ಮಾರ್ಚ್ 26ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರು ಕಳೆದ ಮೂರು ತಿಂಗಳಲ್ಲಿ ರಾಜ್ಯಕ್ಕೆ ಆರು ಬಾರಿ ಭೇಟಿ ನೀಡಿದ್ದು,  ಶನಿವಾರ ಏಳನೇ ಬಾರಿ ಭೇಟಿ ನೀಡುತ್ತಿದ್ದಾರೆ. ಅಂದು ಕೆಆರ್‌ ಪುರಂ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಬಿಜೆಪಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT