ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಜೆಡಿಎಸ್ ಎರಡನೇ ಲಿಸ್ಟ್ ರಿಲೀಸ್: ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಮಮತಾ ಬ್ಯಾನರ್ಜಿ?

Shilpa D

ಹಾಸನ: ನಾಳೆಯೇ ಚುನಾವಣಾ ದಿನಾಂಕ ಘೋಷಣೆಯಾದರೆ ವಿಧಾನಸಭೆ ಚುನಾವಣೆ ಎದುರಿಸಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ

ಹೊಳೆನರಸಿಪುರದಲ್ಲಿ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಜೆಡಿಎಸ್ ನಾಯಕರು 224 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ನಿರ್ಧರಿಸಲು ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಅಂತಿಮ ಪಟ್ಟಿಯನ್ನು ಹೊರತಂದ ಕೂಡಲೇ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಘೋಷಿಸಲು ಜೆಡಿಎಸ್ ನಾಯಕರು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಉಲ್ಲೇಖಿಸಿದ ರೇವಣ್ಣ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಮತ್ತು ಪ್ರಮುಖ ವಿರೋಧ ಪಕ್ಷಗಳ ಇತರ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್ ಪರ ಪ್ರಚಾರಕ್ಕೆ ಮಮತಾ ಬ್ಯಾನರ್ಜಿ?

ಮಹತ್ವದ ಬೆಳವಣಿಗೆಯೊಂದರಲ್ಲಿ ಶುಕ್ರವಾರ ಸಂಜೆ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದರು. ಜೆಡಿಎಸ್‌ನ ಪಂಚರತ್ನ ಯಾತ್ರೆಯ ಯಶಸ್ಸಿನ ಬಗ್ಗೆ ತಿಳಿದ ಬ್ಯಾನರ್ಜಿ, ಚುನಾವಣೆಗೂ ಮುನ್ನ ಪಕ್ಷದ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT