ಡಿಕೆ.ಶಿವಕುಮಾರ್ 
ರಾಜಕೀಯ

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು:‌ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ನೇ ಪಟ್ಟಿಯಲ್ಲಿ ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ಹೇಳಿದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿ, ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆಂದು ತಿಳಿಸಿದರು.

ರಾಜಾಜಿನಗರ ಕ್ಷೇತ್ರದಲ್ಲಿ ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿ, ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ. ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಕುರಿತು ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, 'ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದರು.

ಇನ್ನೂ ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು ಎಂದು ತಿಳಿಸಿದರು.

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT