ಸಿದ್ದರಾಮಯ್ಯ 
ರಾಜಕೀಯ

ಸರ್ವಶಕ್ತ ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಮಾತನಾಡಲು ಮುಜುಗರ ಯಾಕೆ?: ಸಿದ್ದರಾಮಯ್ಯ

ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ವಶಕ್ತ ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಮಾತನಾಡಲು ಮುಜುಗರ...

ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ವಶಕ್ತ ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಮಾತನಾಡಲು ಮುಜುಗರ ಯಾಕೆ? ಎಂದು ಶನಿವಾರ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಬಹುಪರಾಕ್ ಹಾಕಿಸಿಕೊಳ್ಳುತ್ತಿರುವ ಸನ್ಮಾನ್ಯ ನರೇಂದ್ರ ಮೋದಿ ಅವರೇ, ಗೌತಮ್ ಅದಾನಿ ಎಂಬ ಉದ್ಯಮಿ ಬಗ್ಗೆ ಮಾತನಾಡಲು ನಿಮಗೆ ಮುಜುಗರ ಯಾಕೆ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರಿಸಲು ಭಯ ಯಾಕೆ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್‌ಐಸಿ ಮತ್ತಿತರ ಸಾರ್ವಜನಿಕ ಕ್ಷೇತ್ರದ ಹಣಕಾಸು ಸಂಸ್ಥೆಗಳು ಗೌತಮ್ ಅದಾನಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದೆಷ್ಟು? ಯಾರ ಸಲಹೆ ಮತ್ತು ಭರವಸೆಯಿಂದ ಜನರ ದುಡ್ಡನ್ನು ಈ ಸಂಸ್ಥೆಗಳು ಅದಾನಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದವು?

ಇಲ್ಲಿಯವರೆಗೆ ಗೌತಮ್ ಅದಾನಿಯವರು ಖರೀದಿಸಿರುವ ಬಿಜೆಪಿ ಪಕ್ಷದ ಚುನಾವಣಾ ಬಾಂಡ್ ಗಳ ಒಟ್ಟು ಮೌಲ್ಯ ಎಷ್ಟು? ಇದನ್ನು ಹೊರತುಪಡಿಸಿ ಪಕ್ಷಕ್ಕೆ ಅವರು ಅಧಿಕೃತವಾಗಿ ಕೊಟ್ಟಿರುವ ದೇಣಿಗೆ ಎಷ್ಟು? 

ನೀವು ಭೇಟಿ ನೀಡಿದ ದೇಶಗಳಲ್ಲಿ ಅದಾನಿಯವರು ಯಾವ ಉದ್ಯಮಗಳನ್ನು ಸ್ಥಾಪಿಸಿದರು? ಯಾವ ಗುತ್ತಿಗೆ ಪಡೆದರು? ಶ್ರೀಲಂಕಾ, ಇಸ್ರೇಲ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಗೌತಮ್ ಅದಾನಿಯವರ ಉದ್ಯಮ ಸ್ಥಾಪನೆಗೂ ಆ ದೇಶಗಳಿಗೆ ನಿಮ್ಮ ಭೇಟಿಗೂ ಏನಾದರೂ ಸಂಬಂಧ ಇದೆಯೇ? ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT