ರಾಜಕೀಯ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ 'ಪಂಜಿನ ಮೆರವಣಿಗೆ'

Nagaraja AB

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು
ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಫ್ರೀಡ್ಂ ಪಾರ್ಕ್ ವರೆಗೆ ಪಂಜಿನ ಮೆರವಣಿಗೆ ಉದ್ದೇಶಿಸಲಾಗಿತ್ತು. ಆದರೆ, ಮಾರ್ಗ ಮಧ್ಯದಲ್ಲಿಯೇ ಅವರನ್ನು  ಪೊಲೀಸರು ತಡೆದರು. 

ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  
 

SCROLL FOR NEXT