ರಕ್ಷಾ ರಾಮಯ್ಯ 
ರಾಜಕೀಯ

ಮೊದಲ ಬಾರಿ ಮತದಾನ ಮಾಡುವ 'ಯುವಜನರ' ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ  ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ  ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆತರುವಲ್ಲಿ ಯುವ ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯುವ ಜವಾಬ್ದಾರಿ ವಹಿಸಿದ್ದಾರೆ.

ರಾಜ್ಯದ  ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರದಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ನೇಮಕ ಮಾಡಿದ್ದು, ರಾಜ್ಯದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ಅವರನ್ನು ಪಕ್ಷದತ್ತ ಸೆಳೆಯುವ ಕೆಲಸವನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಾ ರಾಮಯ್ಯ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಉತ್ಸವ. ಹೀಗಾಗಿ ಈ ಚುನಾವಣೆಯಲ್ಲಿ ವಿಶೇಷವಾಗಿ ಯುವ ಜನಾಂಗವನ್ನು ಸೆಳೆದು ವರಿಷ್ಠರು ತಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಕೈಗೊಂಡು ಪಕ್ಷದ ಪರ ಪ್ರಚಾರ ಬಿರುಸುಗೊಳಿಸುವುದಾಗಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT